ಬೈಕ್ ಡಿಕ್ಕಿ: ವಿದ್ಯಾರ್ಥಿನಿ ಸಾವು

KannadaprabhaNewsNetwork | Published : Oct 31, 2023 1:16 AM

ಸಾರಾಂಶ

ರಸ್ತೆಯಲ್ಲಿ ನಡೆದುಕೊಂಡು ಹೋಗುವ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟಿರುವ ಘಟನೆ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುವ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟಿರುವ ಘಟನೆ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ನಿವಾಸಿ ಕಾಂತರಾಜು ರವರ ಪುತ್ರಿ ಜಾನೂಶ್ರೀ(7) ಎಂದು ಗುರುತಿಸಲಾಗಿದೆ. ತಾಯಿ ಜೊತೆ ಚಿಕ್ಕಬಳ್ಳಾಪುರ ನಗರದಲ್ಲಿರುವ ಶನಿಮಹಾತ್ಮ ದೇವಸ್ಥಾನಕ್ಕೆ ಪೂಜೆ ಮಾಡಿಕೊಂಡು ಬರಲು ಹೋಗಲು ಆಗಮಿಸಿ ಬಳಿಕ ವಾಪಸ್ ಮನೆಗೆ ಬರಲು ತಿರ್ನಹಳ್ಳಿ ಕ್ರಾಸ್ ನಲ್ಲಿ ಇಳಿದುಕೊಂಡು ಮುದ್ದೇನಹಳ್ಳಿಯಲ್ಲಿರುವ ಪಂಚವಟಿ ಶ್ರೀ ಗೋವಿಂದತೀರ್ತ ಸ್ವಾಮಿ ಶಾಲೆಯ ಬಳಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಬರುತ್ತಿದ್ದಾಗ ಅದೇ ಸಮಯಕ್ಕೆ ತಿರ್ನಹಳ್ಳಿ ಕಡೆಯಿಂದ ಬಜಾಜ್ ಪಲ್ಸರ್ ದ್ವಿ ಚಕ್ರ ವಾಹನ ಸವಾರನು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಈ ಕುರಿತು ನಂದಿಗಿರಿಧಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article