ಬೈಕ್ ಡಿಕ್ಕಿ: ಚಿರತೆ ಸಾವು

KannadaprabhaNewsNetwork |  
Published : May 09, 2026, 01:30 AM IST
ಪೋಟೋ: 08ಎಸ್‌ಎಂಜಿಕೆಪಿ09 | Kannada Prabha

ಸಾರಾಂಶ

ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಚಿರತೆಯೊಂದಕ್ಕೆ ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬೈಕ್ ಸವಾರ ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಚಿರತೆ ಅಡ್ಡ ಬಂದಿದೆ.

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಚಿರತೆಯೊಂದಕ್ಕೆ ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬೈಕ್ ಸವಾರ ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಚಿರತೆ ಅಡ್ಡ ಬಂದಿದೆ. ಇದರಿಂದ ನಿಯಂತ್ರಣ ತಪ್ಪಿದ ಬೈಕ್ ಸವಾರ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳವಾಡಿಯಲ್ಲಿ ಅಂಬೇಡ್ಕರ್‌ ಪುತ್ಥಳಿ ಅನಾವರಣ
ಸಂಬಳ ಹೆಚ್ಚಳಕ್ಕೆ ಒತ್ತಾಯಿಸಿ ಶಾಹಿ ಕಂಪನಿ ಕಾರ್ಮಿಕರ ಪ್ರತಿಭಟನೆ