ಬೈಕ್‌ ಅಡ್ಡಗಟ್ಟಿ ದರೋಡೆ: 7 ಆರೋಪಿಗಳ ಬಂಧನ

KannadaprabhaNewsNetwork |  
Published : Feb 19, 2026, 01:30 AM IST
ಸಿಕೆಬಿ-1 ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ “ಜೀತ ಕಾರ್ಮಿಕ ಪದ್ಧತಿ ನಿರ್ಮೂಲನಾ ದಿನಾಚರಣೆ ಹಾಗೂ ಅರಿವು ಕಾರ್ಯಕ್ರಮ”ಕ್ಕೆ ಸಿ.ಇ.ಓ ಡಾ. ವೈ.ನವೀನ್ ಭಟ್ ಚಾಲನೆ ನೀಡಿದರು | Kannada Prabha

ಸಾರಾಂಶ

ತುಮಟಗೆರೆ ಗ್ರಾಮದ ಬಳಿ ವಾಹನವನ್ನು ಅಡ್ಡಗಟ್ಟಿ ಅವರಿಂದ 8 ಲಕ್ಷ ನಗದನ್ನು ಕಸಿದುಕೊಂಡು ಪರಾರಿಯಾಗಿದ್ದರು.

ಬಂಗಾರಪೇಟೆ: ದ್ವಿಚಕ್ರ ವಾಹನ ಸವಾರರನ್ನು ತಡೆದು ₹8 ಲಕ್ಷ ದೋಚಿದ್ದ ದರೋಡೆಕೋರರನ್ನು ಪೊಲೀಸರು ಬಂಧಿಸಿ ಅವರಿಂದ ಆರುವರೆ ಲಕ್ಷ ನಗದು ಹಾಗೂ ದರೋಡೆಗೆ ಬಳಸಿದ್ದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಕಳೆದ ತಿಂಗಳು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ನಿವಾಸಿ ನವೀನ್ ಕುಮಾರ್ ತನ್ನ ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಹೋಗುತ್ತಿದ್ದಾಗ, ತುಮಟಗೆರೆ ಗ್ರಾಮದ ಬಳಿ ವಾಹನವನ್ನು ಅಡ್ಡಗಟ್ಟಿ ಅವರಿಂದ 8 ಲಕ್ಷ ನಗದನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣವನ್ನು ಬೇಧಿಸಲು ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್‌ ವಿಶೇಷ ತಂಡ ರಚನೆ ಮಾಡಿದ್ದರು. ಈ ತಂಡವು ಕೋಡಗುರ್ಕಿ ಗ್ರಾಮದ

ನಾಗರಾಜ, ಕುಮಾರಸ್ವಾಮಿ, ಬೆಂಗಳೂರಿನ ರಾಜಾಜಿನಗರದ ಜಗದೀಶ್, ವಿಜಯ್, ಜೀವನ್, ದಾಸರಹೊಸಹಳ್ಳಿ ಗ್ರಾಮದ ಹರೀಶ್‌ಕುಮಾರ್ ಹಾಗೂ ಶ್ರೀನಿವಾಸಪುರ ತಾಲೂಕಿನ ರಾಜೇಂದ್ರರನ್ನು ಬಂಧಿಸಿ ದರೋಡೆಗೆ ಬಳಸಿದ್ದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಸರ್ಕಾರದಲ್ಲೇ ಹೆಚ್ಚು ಕಮಿಷನ್‌ ವಸೂಲಿ: ಗುತ್ತಿಗೆದಾರರ ಸಂಘದ ಮಂಜುನಾಥ
ರಾಗಿ ಬೇಡಿಕೆ, ಬೆಲೆ ಹೆಚ್ಚಾಗಲಿದೆ: ಸುರೇಶ್‌ಗೌಡ ವಿಶ್ವಾಸ