ಕ್ಯಾಂಟರ್ ಡಿಕ್ಕಿ ಬೈಕ್ ಸವಾರ ಸಾವು

KannadaprabhaNewsNetwork |  
Published : Nov 04, 2023, 12:30 AM IST

ಸಾರಾಂಶ

ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ತಳಗವಾದಿ ಗೇಟ್ ನ ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮಳವಳ್ಳಿ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ತಳಗವಾದಿ ಗೇಟ್ ನ ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ನೆಲಮಾಕನಹಳ್ಳಿ ಸಿದ್ದೇಗೌಡರ ಪುತ್ರ ಎನ್.ಸಿ.ಶಶಿಕುಮಾರ್(23) ಮೃತಪಟ್ಟ ಬೈಕ್ ಸವಾರ. ಶುಕ್ರವಾರ ಮಧ್ಯಾಹ್ನ ತಮ್ಮ ಬೈಕ್ ನಲ್ಲಿ ಕೆ.ಎಂ.ದೊಡ್ಡಿಯತ್ತ ತೆರಳುತ್ತಿದ್ದ ವೇಳೆ ನಿಸರ್ಗ ಡಾಬಾ ಬಳಿ ಮದ್ದೂರಿನಿಂದ ಮಳವಳ್ಳಿಗೆ ಹೋಗುತ್ತಿದ್ದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರನಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆ.ಎಸ್.ಎಸ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಂಜೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಬಿ.ಜಿ.ಮಹೇಶ್, ಪಿಎಸ್ಐ ಶ್ರವಣ ಸ ದಾಸರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ