ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸರಕು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಮನಗೂಳಿ ಪಟ್ಟಣದ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಮುಳವಾಡ ಕ್ರಾಸ್‌ನಲ್ಲಿ ಶುಕ್ರವಾರ ಸಂಭವಿಸಿದೆ. ಮನಗೂಳಿ ಪಟ್ಟಣದ ಭೀಮಶಿ ಯಲಗೂರಪ್ಪ ಹಿಟ್ನಳ್ಳಿ(48) ಮತ್ತು ಖಂಡೋಬಾ ಮಾರ್ತಂಡ ಘೋರ್ಪಡೆ(55) ಇಬ್ಬರು ಮೃತ ದುರ್ದೈವಿಗಳು. ಇವರು ಆಲಮಟ್ಟಿಯಿಂದ ವಿಜಯಪುರ ಕಡೆಗೆ ಹೊರಟ್ಟಿದ್ದ ಲಾರಿಯೊಂದು ರಸ್ತೆ ದಾಟುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಸರಕು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಮನಗೂಳಿ ಪಟ್ಟಣದ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಮುಳವಾಡ ಕ್ರಾಸ್‌ನಲ್ಲಿ ಶುಕ್ರವಾರ ಸಂಭವಿಸಿದೆ. ಮನಗೂಳಿ ಪಟ್ಟಣದ ಭೀಮಶಿ ಯಲಗೂರಪ್ಪ ಹಿಟ್ನಳ್ಳಿ(48) ಮತ್ತು ಖಂಡೋಬಾ ಮಾರ್ತಂಡ ಘೋರ್ಪಡೆ(55) ಇಬ್ಬರು ಮೃತ ದುರ್ದೈವಿಗಳು. ಇವರು ಆಲಮಟ್ಟಿಯಿಂದ ವಿಜಯಪುರ ಕಡೆಗೆ ಹೊರಟ್ಟಿದ್ದ ಲಾರಿಯೊಂದು ರಸ್ತೆ ದಾಟುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿಢೀರ್ ಪ್ರತಿಭಟನೆ:
ಇನ್ನು, ಬೈಕ್ ಸವಾರರ ಸಾವಿಗೆ ಲಾರಿ ಚಾಲಕನ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಸ್ಥಳೀಯರು ದಿಢೀರ್ ಜಮಾಯಿಸಿ ಹೆದ್ದಾರಿ ತಡೆದು ತೀವ್ರ ಪ್ರತಿಭಟನೆ ನಡೆಸಿದರು. ಸುಮಾರು ನಾಲ್ಕು ಗಂಟೆ ಕಾಲ ರಸ್ತೆ ಬಂದ್ ಮಾಡಿದ್ದರಿಂದ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.