ಕನ್ನಡಪ್ರಭ ವಾರ್ತೆ ಬೆಂಗಳೂರು
ಬ್ಯಾಟರಾಯನಪುರದ ಇಬ್ರಾಹಿಂ ಪಾಷಾ(19), ಮಾಗಡಿ ರಸ್ತೆಯ ಚರಣ್(20) ಮತ್ತು ಮನೀಶ್(21) ಬಂಧಿತರು. ಆರೋಪಿಗಳಿಂದ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್ ಮಾಡುವವರ ಹಾವಳಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣ ಮತ್ತು ಸಾರ್ವಜನಿಕರ ಮಾಹಿತಿ ಆಧರಿಸಿ ವ್ಹೀಲಿಂಗ್ ಮಾಡುವವರ ಪತ್ತೆಗೆ ಸಂಚಾರ ಪಶ್ಚಿಮ ಉಪವಿಭಾಗದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ಪೊಲೀಸರ ಈ ತಂಡಗಳು ಭಾನುವಾರ ಕಾರ್ಯಾಚರಣೆ ನಡೆಸಿ ಮೂವರು ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದಾರೆ.ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಒಂದು ಮತ್ತು ಮಾಗಡಿ ರಸ್ತೆ ಸಂಚಾರ ಠಾಣೆಯಲ್ಲಿ ಎರಡು ಸೇರಿ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ.ಹದ್ದಣ್ಣವರ್ ತಿಳಿಸಿದ್ದಾರೆ.