ಗೂಡ್ಸ್ ವಾಹನದೊಂದಿಗೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

KannadaprabhaNewsNetwork |  
Published : May 22, 2026, 01:45 AM IST
21ಕೆಎಂಎನ್ ಡಿ24 | Kannada Prabha

ಸಾರಾಂಶ

ಡಿಕ್ಕಿ ರಭಸಕ್ಕೆ ಬೈಕ್ ಜಖಂಗೊಂಡು ಗೂಡ್ಸ್ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ನಾಗಮಂಗಲ: ಬೈಕ್ ಮತ್ತು ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ದೊಡ್ಡಾಬಾಲ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ವಾಸಿ ಹನುಮಂತಪ್ಪನ ಪುತ್ರ ಮಂಜುನಾಥ್(19) ಘಟನೆಯಲ್ಲಿ ಸಾವನ್ನಪ್ಪಿರುವ ಯುವಕ. ಗೂಡ್ಸ್ ವಾಹನ ಚಾಲಕ ಮತ್ತು ಸಹಾಯಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಯನಿಮಿತ್ತ ತನ್ನ ಪಲ್ಸರ್ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿದ್ದ ಮಂಜುನಾಥ್ ನಾಗಮಂಗಲ ಪಟ್ಟಣದಿಂದ ಬಿಂಡಿಗನವಿಲೆ ರಸ್ತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಟಾಟಾ ಏಸ್ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೈಕ್ ಜಖಂಗೊಂಡು ಗೂಡ್ಸ್ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕಾಗಮಿಸಿದ ಬಿಂಡಿಗನವಿಲೆ ಪೊಲೀಸ್ ಠಾಣೆ ಪಿಎಸ್‌ಐ ಮಾರುತಿ ಹಾಗೂ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಂಜುನಾಥ್ ಮೃತದೇಹವನ್ನು ತಾಲೂಕಿನ ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ. ನಾಗಮಂಗಲ ಡಿವೈಎಸ್‌ಪಿ ಬಿ.ಚಲುವರಾಜು ಮತ್ತು ಸಿಪಿಐ ಹೇಮಂತ್‌ಕುಮಾರ್ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬಿಂಡಿಗನವಿಲೆ ಠಾಣೆ ಪೊಲೀಸರು ಜಖಂಗೊಂಡಿರುವ ಬೈಕ್ ಮತ್ತು ಗೂಡ್ಸ್ ವಾಹನ ವಶಕ್ಕೆ ಪಡೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಗುವಳಿ ಚೀಟಿಗಾಗಿ ಭೂ ಹಕ್ಕುದಾರರ ವೇದಿಕೆ ಪ್ರತಿಭಟನೆ
ಎಚ್‌ಸಿಜಿ ಸಂಸ್ಥೆಯಿಂದ ಉತ್ತರ ಬೆಂಗಳೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ಶುಭಾರಂಭ,