ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ಗುರುವಾರ ರಾತ್ರಿ 10ರ ಸುಮಾರಿಗೆ ನನಗೆ ಕಾಖಂಡಕಿ ಅವರು ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೀಳಗಿಯಲ್ಲಿ ನನಗೆ ಹೇಳದೆ ಪಕ್ಷದ ಯುವಕರನ್ನು ಸಂಘಟನೆ ಮಾಡುತ್ತಿದ್ದಿಯಾ? ಅದನ್ನು ಬಿಡಬೇಕು ಇಲ್ಲದಿದ್ದರೆ ನಿನ್ನ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿದರು.
ಅವರ ಮಗನಿಂದ ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಜಿಪಂ ಮಾಜಿ ಸದಸ್ಯ ಹಾಗೂ ಈಗ ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕಾಖಂಡಕಿ ಅವರು ಬೆದರಿಕೆ ಹಾಕುತ್ತಿದ್ದಾರೆ. ಪಕ್ಷಕ್ಕೆ ಹಾಗೂ ನನಗೆ ಧಕ್ಕೆ ತರುತ್ತಿದ್ದಾರೆ ಎಂದು ಆಪಾದಿಸಿದರು.ಈಗಾಗಲೇ ಎಲ್ಲ ಘಟನೆಗಳ ಬಗ್ಗೆ ಶಾಸಕ ಜೆ.ಟಿ. ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರ ಗಮನಕ್ಕೆ ತಂದಿದ್ದು, ರಾಜ್ಯ ನಾಯಕರಿಗೂ ತಿಳಿಸಿದ್ದೇನೆ. ಕೂಡಲೇ ಕಾಖಂಡಕಿ ಅವರ ವಿರುದ್ಧ ಪಕ್ಷ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರನ್ನು ನೀಡುತ್ತೇನೆ ಎಂದರು.