ಚುನಾವಣೆಯಲ್ಲಿ 9 ಮಂದಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಬಿಂಡಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 9 ಮಂದಿ ಆಯ್ಕೆಯಾದರು.
ಸಂಘದ 11 ಸ್ಥಾನಗಳ ಪೈಕಿ ಜೆಡಿಎಸ್ ಬೆಂಬಲಿತರು 9 ಸ್ಥಾನ ಪಡೆದು ಆಡಳಿತ ಚುಕ್ಕಾಣಿ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕೈಬಲಪಡಿಸಿದ್ದಾರೆ.
ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲಾ ಜೆಡಿಎಸ್ ಬೆಂಬಲಿತ ನಿರ್ದೇಶಕರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿ ಮಾತನಾಡಿ, ಚುನಾವಣೆಯಲ್ಲಿ 9 ಮಂದಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಆಯ್ಕೆಯಾಗಿರುವ ಎಲ್ಲಾ ನೂತನ ನಿರ್ದೇಶಕರಿಗೆ ಅಭಿನಂಧನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲರು ಜತೆಗೂಡಿ ರೈತರ ಪ್ರಗತಿಗೆ ಪೂರಕವಾಗಿ ಕೆಲಸ ಮಾಡಬೇಕು, ಸರಕಾರಗಳಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ರೈತರಿಗೆ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಜೆಡಿಎಸ್ ಪಕ್ಷದ ಮುಖಂಡರಾದ ಬಿ.ಪಿ.ಶ್ರೀನಿವಾಸ್, ಹುಚ್ಚೇಗೌಡ, ಯಶವಂತ್‌ಕುಮಾರ್, ಕರಿಗೌಡ, ಗಂಗಾಧರ್, ಧರಣಿ, ರವಿಕರ, ಪ್ರಕಾಶ್, ನಿವೃತ ಶಿಕ್ಷಕ ಶಿವಪ್ಪ, ಪುಟ್ಟರಾಜು, ಗಿರಿಯಾರಳ್ಳಿವಾಸು ಸೇರಿದಂತೆ ಡಿಂಕಾ ಬನ್ನಂಗಾಡಿ ಗ್ರಾಮದ ಎಲ್ಲಾ ಮುಖಂಡರುಗಳು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.