ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸಂಪನ್ಮೂಲ ವ್ಯಕ್ತಿಯಾಗಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ್ ಪರಿಸರ ಅವರು ಮಾತನಾಡಿ, ಪರಿಸರದಲ್ಲಿ ಜೀವವೈವಿಧ್ಯತೆಯ ಪ್ರಾಮುಖ್ಯತೆ ಮತ್ತು ಸಂರಕ್ಷಣೆ ಕುರಿತು ವಿವರಿಸಿದರು.
ಪರಿಸರದಲ್ಲಿ ಪ್ಲಾಸ್ಟಿಕ್‌ನಿಂದ ಆಗುತ್ತಿರುವ ಅನಾಹುತಗಳು, ಜೀವ ವೈವಿಧ್ಯತೆಯ ನಾಶ ಮತ್ತು ಮಾನವ, ವನ್ಯಜೀವಿಗಳ ಮೇಲೆ ಹೆಚ್ಚುತ್ತಿರುವ ದುಷ್ಪರಿಣಾಮಗಳ ಕುರಿತು ತಿಳಿಸುತ್ತಾ ಸರ್ಕಾರ 2022ರಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಿರುವುದು ನಿಜ. ಆದರೆ ಉತ್ಪಾದನೆಗೆ ತಡೆ ನೀಡಲಿಲ್ಲ. ಎಲ್ಲಿಯವರೆಗೂ ಉತ್ಪಾದನೆಯನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೂ ಅದರ ಬಳಕೆ ನಿಲ್ಲುವುದಿಲ್ಲ ಎಂದರು.ಪರಿಸರ ಸಂರಕ್ಷಣೆಯಲ್ಲಿ ಸರ್ಕಾರದ ಜೊತೆ ಸಾರ್ವಜನಿಕರಾದ ನಾವೆಲ್ಲ ಕೈಜೋಡಿಸುವುದರಿಂದ ಮಾತ್ರ ಈ ಪ್ಲಾಸ್ಟಿಕ್ ನಿಂದ ಆಗುವ ದುಷ್ಪರಿಣಾಮಗಳನ್ನು ನಿಲ್ಲಿಸಲು ಸಾಧ್ಯ. ಹಾಗಾಗಿ ನಾವೆಲ್ಲರೂ ಎಚ್ಚೆತ್ತುಕೊಂಡು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ್ ನೋನಿ ವ್ಯಾಲ್ಯೂ ಪ್ರಾಡಕ್ಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಶ್ರೀನಿವಾಸಮೂರ್ತಿ ಮಾತನಾಡಿ, ಅಮೃತ್ ನೋನಿ ಸಂಸ್ಥೆಯು ಬೆಳೆದು ಬಂದ ಹಾದಿಯನ್ನು ಸರಳವಾಗಿ ತಿಳಿಸಿ, ಪರಿಸರದ ಪ್ರಾಮುಖ್ಯತೆಯ ಬಗ್ಗೆ ಪ್ರತಿಯೊಬ್ಬರಿಗೂ ಕಾಳಜಿ ಇರುವುದು ಅನಿವಾರ್ಯವಾಗಿದೆ. ಪ್ರತಿಯೊಬ್ಬರೂ ಒಂದು ತಂಡವಾಗಿ ಪ್ರಾಮಾಣಿಕತೆಯಿಂದ ನಿರ್ವಹಿಸಿದರೆ ಎಂತಹ ಸಾಧನೆಯನ್ನು ಕೂಡ ಮಾಡಲು ಸಾಧ್ಯವಿದೆ. ಇದಕ್ಕೆ ನಮ್ಮ ಸಂಸ್ಥೆ ಸಾಕ್ಷಿ ಎಂದರು.