ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ಹೆದ್ದಾರಿ ಅಭಿವೃದ್ಧಿಗೆ 64 ಕೋಟಿ ರು: ಚೌಟ

KannadaprabhaNewsNetwork |  
Published : Apr 20, 2026, 02:45 AM IST
ಬ್ರಿಜೇಶ್ ಚೌಟ | Kannada Prabha

ಸಾರಾಂಶ

ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್‌ನಿಂದ ಪೂಂಜಾಲಕಟ್ಟೆ ವರೆಗಿನ ಹೆದ್ದಾರಿ ನಿರ್ವಹಣೆ, ಬಿ.ಸಿ. ರೋಡ್ ಜಂಕ್ಷನ್‌ನಿಂದ ಗಾಣದಪಡ್ಪು ಹೆದ್ದಾರಿಯನ್ನು ಚತುಷ್ಪಥವನ್ನಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 64 ಕೋಟಿ ರು. ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್‌ನಿಂದ ಪೂಂಜಾಲಕಟ್ಟೆ ವರೆಗಿನ ಹೆದ್ದಾರಿ ನಿರ್ವಹಣೆ, ಬಿ.ಸಿ. ರೋಡ್ ಜಂಕ್ಷನ್‌ನಿಂದ ಗಾಣದಪಡ್ಪು ಹೆದ್ದಾರಿಯನ್ನು ಚತುಷ್ಪಥವನ್ನಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 64 ಕೋಟಿ ರು. ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಈ ಕಾಮಗಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿರುವ ಸಂಸದರು, ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ.ರೋಡ್‌ನಿಂದ ಪುಂಜಾಲಕಟ್ಟೆವರೆಗಿನ ಸುಮಾರು 20 ಕಿಮೀ. ಹೆದ್ದಾರಿಯ ನಿರ್ವಹಣೆ ಕಾಮಗಾರಿಗಳಿಗಾಗಿ ಒಟ್ಟು 34.53 ಕೋಟಿ ರು.ಗಳ ಅನುದಾನವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಜೂರು ಮಾಡಿದೆ. ಜತೆಗೆ ಬಿ.ಸಿ. ರೋಡ್‌ ಜಂಕ್ಷನ್‌ನಿಂದ ಬಂಟ್ವಾಳ ಕಡೆಗೆ ಹೋಗುವ ಹೆದ್ದಾರಿಯಲ್ಲಿ ಶ್ರೀ ನಾರಾಯಣಗುರು ಮಂದಿರದ ವರೆಗಿನ ರಸ್ತೆ ಸದ್ಯ ಅಗಲೀಕರಣಕ್ಕೆ ಬಾಕಿಯಿದೆ. ಈ ಭಾಗದ ಹೆದ್ದಾರಿಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವುದಕ್ಕೆ ಒಟ್ಟು 22.59 ಕೋಟಿ ರು.ಗಳ ಅನುದಾನ ದೊರೆತಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.

ಹಾಗೆಯೇ 73 ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ. ರೋಡ್‌ ಜಂಕ್ಷನ್‌, ಚಾರ್ಮಾಡಿ ಘಾಟಿಯಲ್ಲಿ ರಸ್ತೆಗಳ ನಿರ್ವಹಣೆ ಕಾಮಗಾರಿಗಾಗಿ 6.92 ಕೋಟಿ ರು. ಅನುದಾನವನ್ನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಈ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡರೆ ನಮ್ಮ ಭಾಗದ ಸುಗಮ ಸಂಚಾರ ಹಾಗೂ ಆರ್ಥಿಕ ಪ್ರಗತಿಗೆ ಹೊಸ ವೇಗ ನೀಡಲಿದೆ. ಮೂಲಸೌಕರ್ಯದ ಈ ಅಭಿವೃದ್ಧಿಯುವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಮೂಲಕ ವಿಕಸಿತ ಭಾರತ ದ ಸಂಕಲ್ಪ ಸಾಕಾರಗೊಳಿಸುವ ಹಾದಿಯಲ್ಲಿ ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಕ್ಯಾ. ಚೌಟ ಸಂತಸ ವ್ಯಕ್ತಪಡಿಸಿದ್ದಾರೆ.

ಕಾಮಗಾರಿ ಪ್ರಗತಿಯಲ್ಲಿ: ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿಯನ್ನು ಕೂಡ ಸುಮಾರು 613.665 ಕೋಟಿ ರು. ವೆಚ್ಚದಲ್ಲಿ ದ್ವಿಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಕೂಡ ಭರದಿಂದ ಸಾಗುತ್ತಿದೆ.

ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿಯಾದ 73ರಲ್ಲಿ ಬಿ.ಸಿ ರೋಡ್‌ನಿಂದ ಪೂಂಜಾಲಕಟ್ಟೆ ವರೆಗೆ ಹೆದ್ದಾರಿ ನಿರ್ವಹಣೆಗೆ ಈಗ ಅನುದಾನ ಮಂಜೂರಾದ ಹಿನ್ನಲೆ ಶೀಘ್ರದಲ್ಲೇ ಕಾಮಗಾರಿ ಕೂಡ ಆರಂಭವಾಗಲಿದೆ. ಬಿಸಿ ರೋಡ್‌ ಜಂಕ್ಷನ್‌ ಬಳಿಯ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೂ ಚಾಲನೆ ದೊರೆಯಲಿದೆ. ಆ ಮೂಲಕ, ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ ಜಾಲ ಮತ್ತಷ್ಟು ಉತನ್ನತೀಕರಣಗೊಳ್ಳುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದು ಸಂಸದ ಕ್ಯಾ. ಚೌಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ತಮ ಸಮಾಜ ಕಟ್ಟುವ ಜವಾಬ್ದಾರಿ ಮಹಿಳೆಯರ ಮೇಲಿದೆ
ಲೀಷಟ್ ಸ್ಥಲಗಳು ವಚನಕಾರರ ಅನುಭಾವದ ಸಾರ