ಜನನ-ಮರಣ ನೋಂದಣಿ ಕಡ್ಡಾಯ

KannadaprabhaNewsNetwork |  
Published : May 25, 2024, 12:46 AM IST
ಜನನ- ಮರಣ ಉಪನೋಂದಣಾಧಿಕಾರಿಗಳ ಸಭೆಯಲ್ಲಿ ಜಿಲ್ಲೆಯ ಅಂಕಿ ಅಂಶಗಳ ನೋಟ 2022-23ರ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. | Kannada Prabha

ಸಾರಾಂಶ

ಜನನ ಮರಣಗಳ ನೋಂದಣಿ ಅಧಿನಿಯಮ 1969ರಂತೆ ಜನನ ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದೆ. ಇಂತಹ ಘಟನೆಗಳು ಸಂಭವಿಸಿದ ಸ್ಥಳದಲ್ಲಿಯೇ ನೋಂದಣಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜನನ ಮರಣಗಳ ನೋಂದಣಿ ಅಧಿನಿಯಮ 1969ರಂತೆ ಜನನ ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದೆ. ಇಂತಹ ಘಟನೆಗಳು ಸಂಭವಿಸಿದ ಸ್ಥಳದಲ್ಲಿಯೇ ನೋಂದಣಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ವಿಜಯಪುರ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತಿಯ ಸಭಾ ಭವನದಲ್ಲಿ ನಡೆದ ಜನನ- ಮರಣ ಉಪನೋಂದಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯತಿ ಕಾರ್ಯದರ್ಶಿ ಹಾಗೂ ಡಿ.ಇ.ಒ ಅವರಿಗೆ ಜಿಲ್ಲಾಮಟ್ಟದ ತರಬೇತಿ ಹಮ್ಮಿಕೊಳ್ಳಲಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಜನನ ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಕಾರ್ಯಗತಗೊಳಿಸಲು ನೋಂದಣಿ ಕಾರ್ಯದಲ್ಲಿ ನಿರತರಾಗಿರುವ ನೋಂದಣಿ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಕಾಲಕಾಲಕ್ಕೆ ಅಧಿನಿಯಮ ಮತ್ತು ನಿಯಮಗಳ ಉಪಬಂಧಗಳ ಪೂರ್ಣವಾದ ಅರಿವು ಮೂಡಿಸುವುದು ಅವಶ್ಯಕವಾಗಿರುತ್ತದೆ. ನೋಂದಣಿ ಪದ್ಧತಿ ಅಡಿ ಕಾರ್ಯ ನಿರ್ವಹಿಸುವ ಎಲ್ಲ ಸಿಬ್ಬಂದಿಗಳಿಗೆ ಅವರ ಪಾತ್ರ ಮತ್ತು ಜವಾಬ್ದಾರಿಗಳನ್ನು ತಿಳಿಸಲು ಹಾಗೂ ಅವರು ನೋಂದಣಿ ಕಾರ್ಯವನ್ನು ನಿರ್ವಹಿಸಲು ಸಹಾಯಕವಾಗುವಂತೆ ಮಾರ್ಗದರ್ಶನ ನೀಡುವ ಸಲುವಾಗಿ ಈ ತರಬೇತಿಯು ಅವಶ್ಯಕವಾಗಿದೆ. ಆದ್ದರಿಂದ ಎಲ್ಲರೂ ಈ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ ಮಾತನಾಡಿ, ಜನನ ಮರಣಗಳ ನೋಂದಣಿ ಕಾರ್ಯದ ಅಧಿನಿಯಮ ಮತ್ತು ನಿಯಮಗಳ ಉಪಬಂಧಗಳ ಪೂರ್ಣವಾದ ಅರಿವು ಮೂಡಿಸುವುದು ಈ ತರಬೇತಿಯ ಉದ್ದೇಶ ಎಂದು ತಿಳಿಸಿದರು. ಈ ವೇಳೆ ವಿಜಯಪುರ ಜಿಲ್ಲೆಯ ಅಂಕಿ ಅಂಶಗಳ ನೋಟ 2022-23ರ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ.ಬಿ.ಅಲ್ಲಾಪೂರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಸಹಾಯಕ ನಿರ್ದೇಶಕ ಎ.ಬಿ.ಮನಿಯಾರ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ, ವ್ಹಿ.ಎಸ್.ಹಿರೇಮಠ, ರವಿಕುಮಾರ ಹುಕ್ಕೇರಿ, ಸುಬ್ರಮಣ್ಯ ಶರ್ಮಾ, ಫರಿದಾಬಾನು ಪಠಾಣ, ಪ್ರಕಾಶ ದೇಸಾಯಿ, ಸಂಜೀವ ಜಿನ್ನೂರ, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯ ಸಿಬ್ಬಂದಿ, ಜಿಲ್ಲೆಯ ಎಲ್ಲ ತಾಲೂಕಿನ ತಾಲೂಕು ಯೋಜನಾಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಡಿ.ಇ.ಓ ರವರು ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!