ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನವನ್ನು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ.ಎ. ಲಾರೆನ್ಸ್ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.
ಸೋಮವಾರಪೇಟೆ: ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನವನ್ನು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ.ಎ. ಲಾರೆನ್ಸ್ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.
ತಾಲೂಕು ಸಾರ್ವಜನಿಕ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿ.ಎ. ಲಾರೆನ್ಸ್, ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರು ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ರಾಜೀವ್ ಗಾಂಧಿಯವರು ಯುವಜನತೆ ಹಾಗೂ ತಂತ್ರಜ್ಞಾನಕ್ಕೆ ಆದ್ಯತೆ ನೀಡಿದರೆ, ದೇವರಾಜ ಅರಸರು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದರು. ಅವರ ಆದರ್ಶಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಳ್ಳಬೇಕು. ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ಕಾಂಗ್ರೆಸ್ ಪಕ್ಷದ ಪ್ರಮುಖ ಉದ್ದೇಶ ಎಂದರು.ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಶೀಲಾ ಡಿಸೋಜ, ನಗರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಮಂಜುಳ ಹರೀಶ್, ಸೈಮನ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಸ್.ಕೆ. ವಿನಿ, ಪಕ್ಷದ ಪ್ರಮುಖರಾದ ರುಬಿನಾ, ಶುಭ ಮತ್ತಿತರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.