ಫೆಬ್ರವರಿ 19ರಂದು ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯುತ್ಸವ: ರಮೇಶ್ ಬಾಬು

KannadaprabhaNewsNetwork |  
Published : Feb 17, 2025, 12:32 AM IST
ಪೋಟೋ: 15ಎಸ್‌ಎಂಜಿಕೆಪಿ03ಶಿವಮೊಗ್ಗದ ಪತ್ರಿಕಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾ ಉಪಾಧ್ಯಕ್ಷ ರಮೇಶ್ ಬಾಬು ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾ ಮರಾಠ ಸಮಾಜ, ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಫೆ.19ರಂದು ಬೆಳಿಗ್ಗೆ 11ಕ್ಕೆ ಕುವೆಂಪು ರಂಗಮಂದಿರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾ ಉಪಾಧ್ಯಕ್ಷ ರಮೇಶ್ ಬಾಬು ಹೇಳಿದರು.

ಸಚಿವ ಮಧು ಉದ್ಘಾಟನೆ

ಶಿವಮೊಗ್ಗ: ಜಿಲ್ಲಾ ಮರಾಠ ಸಮಾಜ, ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಫೆ.19ರಂದು ಬೆಳಿಗ್ಗೆ 11ಕ್ಕೆ ಕುವೆಂಪು ರಂಗಮಂದಿರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾ ಉಪಾಧ್ಯಕ್ಷ ರಮೇಶ್ ಬಾಬು ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ವಿಶೇಷ ಆಹ್ವಾನಿತರಾಗಿ ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿರುವರು. ಶಾಸಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ. ಸಂಗಮೇಶ್, ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ, ಶಾರದಾ ಪೂರ್ಯಾನಾಯ್ಕ್, ಬಿ.ವೈ. ವಿಜಯೇಂದ್ರ, ಎಸ್.ಎಲ್. ಭೋಜೇಗೌಡ, ಭಾರತಿಶೆಟ್ಟಿ, ಡಿ.ಎಸ್. ಅರುಣ್, ಬಲ್ಕಿಶ್ ಬಾನು, ಡಾ. ಧನಂಜಯ ಸರ್ಜಿ ಸೇರಿದಂತೆ ವಿವಿಧ ನಿಗಮಗಳ, ಮಂಡಳಿಗಳ ಅಧ್ಯಕ್ಷರು ಇರುವರು ಎಂದರು.

ಈ ಕಾರ್ಯಕ್ರಮದಲ್ಲಿ ಯುವ ವಾಗ್ಮಿ ಹಾರಿಕಾ ಮಂಜುನಾಥ್ ವಿಶೇಷ ಉಪನ್ಯಾಸ ನೀಡುವರು. ಸಮಾಜದ ಬಾಂಧವರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.

ಇದೇ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಮಾಡಲಾಗುವುದು. ಯುಗ ಪುರುಷ ಶಿವಾಜಿ ಮಹಾರಾಜರ ಜಯಂತಿಯನ್ನು ನಾವೆಲ್ಲರೂ ಸಂಭ್ರಮದಿಂದ ಆಚರಿಸಬೇಕಾಗಿದೆ. ಸಮಾಜ ಬಾಂಧವರು ಭಾಗವಹಿಸಿ ಹಿಂದೂ ರಾಷ್ಟ್ರಕ್ಕಾಗಿ ಸಂಘಟಿತರಾಗಬೇಕು ಎಂದು ಕರೆ ನೀಡಿದರು.

ಗೋಷ್ಠಿಯಲ್ಲಿ ಸಮಾಜದ ಪ್ರಮುಖರಾದ ದಿನೇಶ್ ರಾವ್, ರಾಜಕುಮಾರ್, ರಾಮರಾವ್, ಟೇಕೋಜಿರಾವ್, ವೀಣಾ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!