ನಾಳೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ

KannadaprabhaNewsNetwork |  
Published : Feb 24, 2025, 12:31 AM IST
ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ 50ನೇ ಕಾರ್ಯಕ್ರಮ | Kannada Prabha

ಸಾರಾಂಶ

ಬೆಳಗ್ಗೆ 8ಗಂಟೆಗೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭವ್ಯ ಮಂಟಪದ ಮೆರವಣಿಗೆ ನಡೆಯಲಿದೆ. ಮೆರವಣಿಗೆಗೆ ಶಾಸಕ ಡಾ. ಮಂತರ್‌ಗೌಡ ಚಾಲನೆ ನೀಡುವರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ 50ನೇ ಕಾರ್ಯಕ್ರಮವಾಗಿ ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಅವರ ನುಡಿನಮನ ಹಾಗೂ ಮಾಜಿ ಮುಖ್ಯಮಂತ್ರಿ ದಿ.ವೀರೇಂದ್ರ ಪಾಟೀಲರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಫೆ.25 ರಂದು ರೈತ ಸಹಕಾರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕುಶಾಲನಗರ ತಾಲೂಕಿನ ಅಭಿವೃದ್ಧಿ ಹರಿಕಾರ ದಿ.ಗುಂಡೂರಾವ್ ಹಾಗೂ ರೈತರ ಜೀವನಾಡಿ ಹಾರಂಗಿ ಜಲಾಶಯದ ನಿರ್ಮಾತೃ ವೀರೇಂದ್ರ ಪಾಟೀಲರನ್ನು ಸ್ಮರಿಸುವ ಕಾರ್ಯಕ್ರಮ ಇದಾಗಿದ್ದು, ಅಂದು ಬೆಳಗ್ಗೆ 8 ಗಂಟೆಗೆ ಕೊಡಗು ಮೈಸೂರು ಗಡಿಭಾಗದ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭವ್ಯ ಮಂಟಪದ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡುವರು. ಬೆಳಗ್ಗೆ 10.30 ಗಂಟೆಗೆ ರೈತ ಭವನದಲ್ಲಿ ನಡೆಯುವ ಸಭಾಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರು ಆದ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆ ವಹಿಸುವರು. ಉಸ್ತುವಾರಿ ಸಚಿವ ಬೋಸರಾಜು ಗುಂಡೂರಾವ್ ಸಭಾಂಗಣ ಉದ್ಘಾಟಿಸುವರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಶಲಸಿರಿ ಪ್ರಶಸ್ತಿ ಪ್ರದಾನ‌‌ ಮಾಡುವರು. ಪಶುಪಾಲನಾ ಸಚಿವ ವೀರೇಂದ್ರ ಪಾಟೇಲ್‌ ಸಭಾಂಗಣ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ತಂಬೆಲರು ಕೃತಿ ಬಿಡುಗಡೆ ಮಾಡುವರು.

ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ಶಾಸಕರಾದ ಎ.ಮಂಜು, ಸುಜಾಕುಶಾಲಪ್ಪ, ಹರೀಶ್ ಗೌಡ, ರವಿಶಂಕರ್, ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ನೀರು ಬಳಕೆದಾರರ ಮಹಾಮಂಡಲ ಅಧ್ಯಕ್ಷ ಚೌಡೇಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬಳಗದ ವತಿಯಿಂದ ಕುಶಲಸಿರಿ ಪ್ರಶಸ್ತಿಯನ್ನು ಮಾಜಿ ಸಚಿವ ಡಿ.ಎಚ್.ಶಂಕರಮೂರ್ತಿ, ಮಾಜಿ‌ ಸಚಿವ‌ ಬಿ.ಎ.ಜೀವಿಜಯ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಕೈಲಾಶ್ ನಾಥ ವೀರೇಂದ್ರ ಪಾಟೀಲ್, ಬಸವರಾಜು, ಸ್ಥಳೀಯ ಮುಖಂಡರಾದ ವಿ.ಪಿ.ಶಶಿಧರ್, ಆರ್.ಕೆ.ನಾಗೇಂದ್ರಬಾಬು, ಕೆ.ಪಿ.ಚಂದ್ರಕಲಾ, ನಾರಾಯಣ್, ಟಿ.ಎನ್. ನಾರಾಯಣ್, ಟಿ ಆರ್ ಶರವಣಕುಮಾರ್, ಎಂ.ಕೆ.ದಿನೇಶ್ ಅವರಿಗೆ ನೀಡಲಾಗುತ್ತಿದೆ ಎಂದರು. ಮಧ್ಯಾಹ್ನ 2.30ಕ್ಕೆ ಗೋಷ್ಠಿ ಹಾಗೂ 3 ಗಂಟೆಗೆ ಸಮಾರಂಭ ಹಾಗೂ ಸಂಜೆ ‌5.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಲೋಕೇಶ್‌ಸಾಗರ್ ಹೇಳಿದರು.

ಗೋಷ್ಠಿಯಲ್ಲಿ ಕನ್ನಡ ಸಿರಿ ಸ್ನೇಹ ಬಳಗದ ಕೆ.ಎಸ್.ಕೃಷ್ಣೇಗೌಡ, ನಾಗರಾಜಶೆಟ್ಟಿ , ಆವರ್ತಿ ಮಹದೇವಪ್ಪ ಇದ್ದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!