ಕನ್ನಡಪ್ರಭ ವಾರ್ತೆ ಕುಶಾಲನಗರ
ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಏಪ್ರಿಲ್ 14 ಇಡೀ ವಿಶ್ವವೇ ಸಂಭ್ರಮಿಸುವ ದಿನವಾಗಿದ್ದು ಅಂಬೇಡ್ಕರ್ ಅವರ ಸಾಧನೆಗಳನ್ನು ಸ್ಮರಿಸಿ ಯುವ ಜನಾಂಗಕ್ಕೆ ಸಮಗ್ರ ಮಾಹಿತಿ ಒದಗಿಸುವ ದಿನವಾಗಿದೆ ಎಂದು ಹೇಳಿದರು.
ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಿ ಸಂಭ್ರಮಿಸಿ ಅವರ ಆಶಯದ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಪಣತೊಡಬೇಕಾಗಿದೆ. ವಿಶೇಷವಾಗಿ ಭಾರತ ದೇಶದ ಶೋಷಿತ ಜನ ಅವರನ್ನು ನೆನೆಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಣೆಯಲ್ಲಿ ತೊಡಗಬೇಕಾಗಿದೆ ಎಂದರು.ಈ ಸಂಬಂಧ ಈಗಾಗಲೇ ಸಂಘದ ವತಿಯಿಂದ ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು.
ಸಂಘದ ನಿರ್ದೇಶಕರಾದ ಎಚ್ ಡಿ ಚಂದ್ರು ಅವರು ಮಾತನಾಡಿ, ಸರಕಾರಿ ಕಾರ್ಯಕ್ರಮಗಳ ಹೊರತಾಗಿ ತಾಲೂಕಿನಾದ್ಯಂತ ಎಲ್ಲಾ ಜನರು ಒಟ್ಟಿಗೆ ಸೇರಿ ಸಂಘ ಸಂಸ್ಥೆಗಳು ಅಂದು ಮನೆಮನ ಹಬ್ಬ ಯಶಸ್ವಿಗೊಳಿಸುವಂತೆ ಕೋರಿದರು.
ಇದೇ ವೇಳೆ ಅಂಬೇಡ್ಕರ್ ಹುಟ್ಟುಹಬ್ಬ ಸಲುವಾಗಿ ಪ್ರಕಟಿಸಿದ ಮನೆ ಮನದ ಹಬ್ಬ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಕೆಎಸ್ ರವಿ, ಎಸ್ ಎಸ್ ಸಂಗಮೇಶ್ ಇದ್ದರು.