ಕನ್ನಡಪ್ರಭ ವಾರ್ತೆ ಕೋಲಾರಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ೯೪ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಸೋಮವಾರ ನಗರದ ಸಾಯಿಬಾಬಾ ಮಂದಿರದಲ್ಲಿ ದೇವೇಗೌಡರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿ ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ದೇಶದಲ್ಲಿ ಪ್ರಧಾನಿಯಾಗಿ ರೈತ ನಾಯಕರಾಗಿ ರಾಷ್ಟ್ರಕ್ಕೆ ನೀಡಿದ ಕೊಡುಗೆ ಅಪಾರ, ರಾಜಕೀಯ ವಲಯದಲ್ಲಿ ಎಲ್ಲಾ ಪಕ್ಷಗಳ ಗೌರವಕ್ಕೆ ಪಾತ್ರರಾಗಿದ್ದಾರೆ. ಕೃಷಿ ನೀರಾವರಿ, ಗ್ರಾಮೀಣ ವಲಯಕ್ಕೆ ಅವರ ಕೊಡುಗೆ ಅಪಾರ ತಮ್ಮ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡರು ದೇಶದ ರಾಜಕೀಯ ಇತಿಹಾಸದಲ್ಲಿ ವಿಶಿಷ್ಟ ಛಾಪು ಮೂಡಿಸಿದ ನಾಯಕ, ರೈತರ ಸಮಸ್ಯೆ, ಗ್ರಾಮೀಣಾಭಿವೃದ್ಧಿ ಹಾಗೂ ಜನಸಾಮಾನ್ಯರ ಪರ ಹೋರಾಟದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರ ಸರಳತೆ ಮತ್ತು ಜನಪರ ಆಡಳಿತ ಇಂದಿಗೂ ಅನೇಕರಿಗೆ ಪ್ರೇರಣೆ. ಅವರ ಜನ್ಮದಿನ ಹಬ್ಬದಂತೆ ದೇಶಾದ್ಯಂತ ಆಚರಿಸುತ್ತಿದ್ದಾರೆ ಎಂದು ಹೇಳಿದರು.
------೧೮ಕೆಎಲ್‌ಆರ್-೭
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ೯೪ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅವರು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.