ಬಿಜೆಪಿ ಮುಖಂಡರು, ಅಭಿಮಾನಿಗಳಿಂದ ದೇವಾಲಯದಲ್ಲಿ ಪೂಜೆ । ವಿಶೇಷ ಚೇತನರ ವಸತಿ ನಿಲಯದಲ್ಲಿ ಸೇವಾ ಕಾರ್ಯ
ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ಹಿತೈಷಿಗಳು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವಿವಿಧ ಸೇವಾ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸಿದರು.
ನಗರದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ವಿಶೇಷಪೂಜೆ, ಸೇವಾಕಿರಣ ವೃದ್ಧಾಶ್ರಮದಲ್ಲಿ ಮತ್ತು ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಬಳಿಯಿರುವ ಮಮತೆಯ ಮಡಿಲು ನಿತ್ಯ ದಾಸೋಹ ಕೇಂದ್ರದಲ್ಲಿ ಗರ್ಭಿಣಿ-ಬಾಣಂತಿ ಹಾಗೂ ಅಗತ್ಯಯುಳ್ಳವರಿಗೆ ಪೌಷ್ಠಿಕಾಹಾರ, ಪ್ರೇರಣಾ ವಿಶೇಷ ಚೇತನರ ವಸತಿ ನಿಲಯದಲ್ಲಿ ಶಾಲಾ ಮಕ್ಕಳಿಗೆ ಆಹಾರ ಮತ್ತು ಸಿಹಿ ವಿತರಣೆ ಕಾರ್ಯಕ್ರಮ ನಡೆಯಿತು.ಜಿಲ್ಲಾ ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ಮಾತನಾಡಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರಾಗಿ ಅನೇಕ ಕೊಡುಗೆ ನೀಡಿದ್ದಾರೆ. ಮಂಡ್ಯ ವಿಶ್ವವಿದ್ಯಾಲಯವಾಗುವುದಕ್ಕೆ ಪ್ರಮುಖ ಕಾರಣೀಭೂತರಾಗಿದ್ದಾರೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ಸದಾನಂದ, ಡಾ.ಅಶ್ವಥ್‌ನಾರಾಯಣ ಉತ್ತಮ ಆಡಳಿತಗಾರ. ಸಂಘಟನಾಶೀಲ ವ್ಯಕ್ತಿತ್ವವಿರುವ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ನಾಡಿನುದ್ದಗಲಕ್ಕೂ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಸೇವಾಕಾರ್ಯಗಳ ಮೂಲಕ ಆಚರಿಸುತ್ತಿದ್ದೇವೆ ಎಂದು ನುಡಿದರು.
--------