ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಹುಟ್ಟುಹಬ್ಬ ಆಚರಣೆ

KannadaprabhaNewsNetwork |  
Published : Feb 02, 2025, 11:45 PM IST
೨ಕೆಎಂಎನ್‌ಡಿ-೪ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಹುಟ್ಟುಹಬ್ಬದ ಪ್ರಯುಕ್ತ  ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ  ಸಿ.ಪಿ.ಉಮೇಶ್ ನೇತೃತ್ವದಲ್ಲಿ ಮಂಡ್ಯದ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ವಿಶೇಷಪೂಜೆ ನೆರವೇರಿಸಲಾಯಿತು. | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಕೊಡುಗೆ ಅಪಾರವಾಗಿದೆ. ಉಪಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್‌ಗೆ ೨ ಕೋಟಿ ರು. ವೆಚ್ಚದ ಸಾಧನ ಸಲಕರಣೆಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಉನ್ನತ ರಾಜಕೀಯ ಅಧಿಕಾರ ದೊರೆತು ರಾಜ್ಯದ ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಲಿ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಹುಟ್ಟುಹಬ್ಬ ಅಂಗವಾಗಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ನೇತೃತ್ವದಲ್ಲಿ ಹಲವು ಸಮಾಜಮುಖಿ ಕಾರ್ಯಕಗಳನ್ನು ನಡೆಸಲಾಯಿತು.

ಮೊದಲಿಗೆ ನಗರದ ಶ್ರೀವಿದ್ಯಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿ.ಪಿ.ಉಮೇಶ್, ಮಂಡ್ಯ ಜಿಲ್ಲೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಕೊಡುಗೆ ಅಪಾರವಾಗಿದೆ. ಉಪಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್‌ಗೆ ೨ ಕೋಟಿ ರು. ವೆಚ್ಚದ ಸಾಧನ ಸಲಕರಣೆಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಉನ್ನತ ರಾಜಕೀಯ ಅಧಿಕಾರ ದೊರೆತು ರಾಜ್ಯದ ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸಿದರು.

ಬಳಿಕ ಬಿಜೆಪಿ ನಗರಾಧ್ಯಕ್ಷ ವಸಂತ್‌ಕುಮಾರ್ ನೇತೃತ್ವದಲ್ಲಿ ನಗರದ ಜಿಲ್ಲಾಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಸ್ಪತ್ರೆಯ ಎಲ್ಲಾ ವಾರ್ಡ್‌ಗಳಿಗೆ ತೆರಳಿ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದರು. ನಗರದ ಸೇವಾಕಿರಣ ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಬಟ್ಟೆಯನ್ನು ವಿತರಿಸಲಾಯಿತು.

ಬಿಜೆಪಿ ಮುಖಂಡರಾದ ಚಾಮರಾಜು, ನಾಗಾನಂದ್, ರಮೇಶ್, ಕ್ರಾಂತಿ ಮಂಜು, ಮನು, ಸೋಮಶೇಖರ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಡಾ.ಅಶ್ವತ್ಥನಾರಾಯಣ ಹುಟ್ಟುಹಬ್ಬ ಆಚರಣೆ

ಕನ್ನಡ ಪ್ರಭ ವಾರ್ತೆ ಮಳವಳ್ಳಿ

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಜನ್ಮದಿನದ ಅಂಗವಾಗಿ ಮಳವಳ್ಳಿಯ ಅಶ್ವತ್ಥನಾರಾಯಣ ಅಭಿಮಾನಿಗಳ ಬಗಳದ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

ನಂತರ ಹೊರವಲಯದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳಿದ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್.ಕೃಷ್ಣ ಮಾತನಾಡಿ, ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾಗಿದ್ದ ವೇಳೆ ಅಶ್ವತ್ಥನಾರಾಯಣ ಅವರು ಜಿಲ್ಲೆಗೆ ಸಾಕಷ್ಟು ಉತ್ತಮ ಕೆಲಸ ಮಾಡಿದ್ದರು. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಅವರ ಶ್ರಮ ಅಪಾರ ಎಂದು ಬಣ್ಣಿಸಿದರು.

ಪುರಸಭೆ ಸದಸ್ಯ ರವಿ, ನಗರ ಘಟಕದ ಅಧ್ಯಕ್ಷ ವೇಣು, ಮುಖಂಡರಾದ ಮಂಜುನಾಥ್, ಶಿವಲಿಂಗಪ್ಪ, ಗೋವಿಂದ, ಸ್ವಾಮಿ, ಗಂಗಾ, ದೇವರಾಜು, ಕಾಂತರಾಜು, ರಮೇಶ್, ಚಂದು, ರವಿ, ಸಲೀಂ ಪಾಷ, ಶಿವಪ್ರಸಾದ್, ಮಂಜು, ಜಗದೀಶ್, ರವಿ, ಚಿಕ್ಕಣ್ಣ, ಮಹೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌