ವಿರಾಜಪೇಟೆ ಶಾಸಕ ಪೊನ್ನಣ್ಣ ಜನ್ಮದಿನಾಚರಣೆ

KannadaprabhaNewsNetwork |  
Published : Jul 11, 2026, 01:15 AM IST
ಚಿತ್ರ :  10ಎಂಡಿಕೆ2 : ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ಶಾಸಕ ಎ.ಎಸ್. ಪೊನ್ನಣ್ಣ.  | Kannada Prabha

ಸಾರಾಂಶ

ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಜನ್ಮ ದಿನಾಚರಣೆ ಜಿಲ್ಲೆಯಾದ್ಯಂತ ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.

ಮಡಿಕೇರಿ: ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಜನ್ಮ ದಿನಾಚರಣೆ ಜಿಲ್ಲೆಯಾದ್ಯಂತ ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.

ಶಾಸಕರು ಮೊದಲಿಗೆ ಭಾಗಮಂಡಲದ ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಾಯಿ ಕಾವೇರಿಗೆ ಪ್ರಾರ್ಥನೆ ಸಲ್ಲಿಸಿ, ಕ್ಷೇತ್ರದ ಜನತೆಯ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಭಾಗಮಂಡಲದ ಅಟಲ್ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬ ಆಚರಿಸಿದರು.

ಮಕ್ಕಳಿಗೆ ಜೀವನದಲ್ಲಿ ಶಿಸ್ತು ಮತ್ತು ವಿದ್ಯಾಭ್ಯಾಸದ ಮಹತ್ವದ ಕುರಿತು ಸಲಹೆ ನೀಡಿದರು. ನಂತರ ಭಾಗಮಂಡಲ ಹಾಗೂ ಕುಂದಚೇರಿಯಲ್ಲಿ ನೂತನವಾಗಿ ನಿರ್ಮಾಣವಾದ ರಸ್ತೆಗಳನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಗೋಣಿಕೊಪ್ಪದಲ್ಲಿ ‘ಕೊಳ್ಳಿಮಾಡ ಸಿ. ಕರುಂಬಯ್ಯ’ ಅವರ ಹೆಸರಿನಲ್ಲಿ ನೂತನವಾಗಿ ನಿರ್ಮಿಸಲಾದ ಸಾರ್ವಜನಿಕ ಬಸ್ ತಂಗುದಾಣ ಉದ್ಘಾಟಿಸಿದರು. ಪೊನ್ನಂಪೇಟೆಯ ನೂತನ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪೊನ್ನಂಪೇಟೆಯ ಪ್ರಮುಖರು ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಗೋಣಿಕೊಪ್ಪಲುವಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಪಂದ್ಯಂಡ ಬೆಳ್ಳಿಯಪ್ಪ ಅವರ ಪುತ್ಥಳಿಯನ್ನು ಶಾಸಕರು ಅನಾವರಣಗೊಳಿಸಿದರು. ಬಹಳ ದಿನಗಳಿಂದ ಹಕ್ಕುಪತ್ರದಿಂದ ವಂಚಿತರಾಗಿದ್ದ ಗೋಣಿಕೊಪ್ಪ ಭಾಗದ ನೂರಾರು ನಿವಾಸಿಗಳಿಗೆ ಶಾಸಕರ ಹಸ್ತದಿಂದ ಹಕ್ಕುಪತ್ರ ವಿತರಿಸಿದರು. ನಂತರ ವಿರಾಜಪೇಟೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಾಸಕರ ಜನ್ಮದಿನದ ಪ್ರಯುಕ್ತ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಭಾಗವಹಿಸಿದರು. ಬಳಿಕ ಹೆಗ್ಗಳ ಗ್ರಾಮದಲ್ಲಿರುವ ವೃದ್ಧಾಶ್ರಮಕ್ಕೆ ತೆರಳಿದ ಶಾಸಕರು, ಅಲ್ಲಿನ ಹಿರಿಯ ಜೀವಗಳೊಂದಿಗೆ ಕೇಕ್ ಕತ್ತರಿಸಿ ಸಂತಸ ಹಂಚಿಕೊಂಡರು. ಈ ಸಂದರ್ಭದಲ್ಲಿ ವೃದ್ಧಾಶ್ರಮದ ನಿವಾಸಿಗಳ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಶಾಸಕರು, ತಮ್ಮ ಸ್ವಂತ ವೆಚ್ಚದಲ್ಲಿ ಆಶ್ರಮಕ್ಕೆ ಫ್ಯಾನ್, ಟೇಬಲ್ ಹಾಗೂ ಟಿ.ವಿ. ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮಗಳಲ್ಲಿ ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ, ಪುತ್ರಿಯರು, ಶಾಸಕರ ಸಹೋದರ ನರೇನ್ ಕಾರ್ಯಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಮಿದೇರಿರ ನವೀನ್, ಪಟ್ಟಡ ರಂಜಿ ಪೂಣಚ್ಚ, ಸೌಕಾತ್ ಆಲಿ, ಪ್ರಮುಖರು ಹಾಗೂ ಅಭಿಮಾನಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂದಾಪ್ರ ಭಾಷಿ ಬದ್ಕ್ ವಿಶ್ವಪ್ರಸಿದ್ಧಿ: ಜ್ಯೋತಿ ಉದಯಕುಮಾರ್
ಅಡಕೆ ಸಾಗಾಟಕ್ಕೆ ಅಡ್ಡಿ : ಮಹಾ ಸಿಎಂ ಜೊತೆ ಸಭೆ