ಕನ್ನಡಪ್ರಭ ವಾರ್ತೆ ಹಿರೇಕೆರೂರು ಬೀಜೋತ್ಪಾದನೆಗಾಗಿ ಅರ್ಧ ಎಕರೆಯಲ್ಲಿ ಬೆಳೆಸಲಾಗಿದ್ದ ಹಾಗಲಕಾಯಿ ಬೆಳೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹಾಳು ಮಾಡಿದ ಘಟನೆ ತಾಲೂಕಿನ ಆಲದಗೇರಿ ಗ್ರಾಮದಲ್ಲಿ ನಡೆದಿದೆ. ನಾಗವ್ವ ಹಿತ್ತಲಮನಿ ಎಂಬವರಿಗೆ ಸೇರಿದ ಬೆಳೆಯನ್ನು ಕಿಡಿಗೇಡಿಗಳು ಹಾಳು ಮಾಡಿದ್ದಾರೆ. ಹತ್ತಾರು ಸಾವಿರ ರು. ಖರ್ಚು ಮಾಡಿ ಬೀಜೋತ್ಪಾದನೆಗಾಗಿ ಅರ್ಧ ಎಕರೆ ಜಾಗದಲ್ಲಿ ಹಾಗಲಕಾಯಿ ಬೆಳೆಸಿದ್ದರು. ಸಾಲ ಮಾಡಿ ಬೆಳೆ ಬೆಳೆದಿದ್ದ ನಾಗವ್ವ ಬೆಳಗ್ಗೆ ಹೊಲಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬೆಳೆ ಹಾಳು ಮಾಡಿರುವುದನ್ನು ಕಂಡು ನಾಗವ್ವ ಕಣ್ಣೀರಿಡುತ್ತಿದ್ದಾರೆ. ಸುಮಾರು ₹2 ಲಕ್ಷ ಹಾನಿಯಾಗಿದೆ. ವಿಷಯ ತಿಳಿದು ರೈತರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸಿ ನಷ್ಟ ವಸೂಲಿ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. 6ಎಚ್‌ವಿಆರ್4 ಹಿರೇಕೆರೂರು ಆಲದಗೇರಿ ಗ್ರಾಮದಲ್ಲಿ ಕಿಡಿಗೇಡಿಗಳು ಹಾಗಲಕಾಯಿ ಬೆಳೆ ಹಾನಿ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.