ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಸರ್ಕಾರ, ಪೊಲೀಸ್ ಇಲಾಖೆ: ಬಿಜೆಪಿ ಆರೋಪ

KannadaprabhaNewsNetwork |  
Published : Aug 06, 2024, 12:39 AM IST
ಬಿಜೆಪಿ5 | Kannada Prabha

ಸಾರಾಂಶ

ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಸ್ಥಾಪಿಸಿ, ನಂತರ ತೆರವುಗೊಳಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕ್ರಿಶ್ ಆರ್ಟ್ ಗ್ಯಾಲರಿಯಲ್ಲಿ ಮಹಜರು ಜಪ್ತು ಮಾಡಿದ ಬಗ್ಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಮಣಿಪಾಲ

ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರೋಪಿಸಿದೆ.

ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಸ್ಥಾಪಿಸಿ, ನಂತರ ತೆರವುಗೊಳಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕ್ರಿಶ್ ಆರ್ಟ್ ಗ್ಯಾಲರಿಯಲ್ಲಿ ಮಹಜರು ಜಪ್ತು ಮಾಡಿದ ಬಗ್ಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ಮಾತನಾಡಿದ ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್, ಪರಶುರಾಮ ಮೂರ್ತಿಯ ವಿನ್ಯಾಸ ಬದಲಾಯಿಸಲು ತೆರವು ಮಾಡುವುದಕ್ಕೆ ನ್ಯಾಯಾಲಯ ಆದೇಶ ನೀಡಿತ್ತು. ಅದರಂತೆ ಬೆಂಗಳೂರಿನಲ್ಲಿ ಮೂರ್ತಿಯ ಕೆಲಸ ನಡೆಯುತ್ತಿತ್ತು. ಇದೀಗ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಪೊಲೀಸರು ಮೂರ್ತಿಯನ್ನು ಜಪ್ತು ಮಾಡಿ ಕಾರ್ಕಳಕ್ಕೆ ತಂದಿದ್ದಾರೆ. ನ್ಯಾಯಾಲಯಕ್ಕಿಂತ ಸರ್ಕಾರ ದೊಡ್ಡದಾ ಎಂದು ಪ್ರಶ್ನಿಸಿದರು.

ಅಯೋಧ್ಯೆಯ ರಾಮನ ಮೂರ್ತಿಯನ್ನು ವರ್ಷಾನುಗಟ್ಟಲೇ ಟೆಂಟ್‌ನಲ್ಲಿ ಇಟ್ಟ ಕಾಂಗ್ರೆಸ್‌ನವರು, ಇಂದು ಪರಶುರಾಮನ ಮೂರ್ತಿಯನ್ನು ಕಾರ್ಕಳ ಪೊಲೀಸ್ ಠಾಣೆಯ ಗೋಡೌನ್‌ನಲ್ಲಿ‌ ಹಾಕಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ಹಗರಣಗಳನ್ನೇ ಮಾಡುವ ಮನಸ್ಥಿತಿಯ ಕಾಂಗ್ರೆಸ್‌ ಇವತ್ತು ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದರು.

ಪ್ರತಿಭಟನಾ ಸಭೆಯ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಪ್ರ. ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಾಯಕರಾದ ಉದಯ ಎಸ್. ಕೋಟ್ಯಾನ್, ಶ್ರೀಕಾಂತ್ ನಾಯಕ್, ಗೀತಾಂಜಲಿ ಎಂ. ಸುವರ್ಣ, ಸಂಧ್ಯಾ ರಮೇಶ್, ದಿನೇಶ್ ಅಮೀನ್, ಜಿತೇಂದ್ರ ಶೆಟ್ಟಿ, ವೀಣಾ ಎಸ್. ಶೆಟ್ಟಿ, ಸುಮಿತ್ ಕೌಡೂರು, ಮಾಲಿನಿ ಜೆ. ಶೆಟ್ಟಿ, ನಿರಂಜನ್ ಜೈನ್, ಗುರುಪ್ರಸಾದ್, ಶಿವಕುಮಾರ್ ಮುಂತಾದವರು ಉಪಸ್ಥಿತರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...