ಮೆಡಿಕಲ್‌ ಮಾಫಿಯಾಕ್ಕೆ ಮಣಿದ ರಾಜ್ಯ ಸರ್ಕಾರ: ಬಿಜೆಪಿ ಆರೋಪ

KannadaprabhaNewsNetwork |  
Published : May 31, 2025, 12:34 AM IST
ಜನೌಷಧಿ ಕೇಂದ್ರವನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಹರಪನಹಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಸರ್ಕಾರಿ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಪನಹಳ್ಳಿ ಬಿಜೆಪಿ ಮಂಡಲದಿಂದ ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಶುಕ್ರವಾರ ಪ್ರತಿಭಟನೆ ನಡೆಸಿದರು.

ಹರಪನಹಳ್ಳಿ: ಸರ್ಕಾರಿ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಪನಹಳ್ಳಿ ಬಿಜೆಪಿ ಮಂಡಲದಿಂದ ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ನಡೆ ಖಂಡಿಸಿದರು. ಈ ವೇಳೆ ಪ್ರತಿಭಟನಾಕಾರರು ಬಡವರಿಗೆ ಅನುಕೂಲವಾಗಿರುವ ಪ್ರಧಾನ ಮಂತ್ರಿ ಜನ-ಔಷಧಿ ಕೇಂದ್ರ ಮುಚ್ಚುವುದರಿಂದ ರೋಗಿಗಳಿಗೆ ಸಾಕಷ್ಟು ತೊಂದರೆಯಾಗಲಿದೆ. ಅಲ್ಲದೇ ರಾಜ್ಯ ಸರ್ಕಾರ ಖಾಸಗಿ ಮೆಡಿಕಲ್ ಮಾಫಿಯಾಗೆ ಮಣಿದು ಮುಚ್ಚುವ ಕೆಲಸವನ್ನು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನೌಷಧಿ ಕೇಂದ್ರಗಳನ್ನು ಪುನಃ ತೆರೆಯುವವರೆಗೂ ಉಗ್ರ ಹೋರಾಟ ಮುಂದುವರಿಸಲಾಗುವುದು ಎಂದು ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಕೆ. ಲಕ್ಷ್ಮಣ, ಮುಖಂಡರಾದ ಜಿ. ನಂಜನಗೌಡ, ಅರುಂಡಿ ನಾಗರಾಜ, ಎಂ.ಪಿ. ನಾಯ್ಕ, ಬಾಗಳಿ ಕೊಟ್ರೇಶಪ್ಪ, ಮುದಕವ್ವನವರ ಶಂಕರ, ಕಣಿವಿಹಳ್ಳಿ ಮಂಜುನಾಥ, ಉದಯಕುಮಾರ, ಓಂಕಾರಗೌಡ, ಎಸ್.ಪಿ. ಲಿಂಬ್ಯನಾಯ್ಕ, ಮಂಜ್ಯನಾಯ್ಕ, ವೆಂಕಟೇಶನಾಯ್ಕ, ರವಿನಾಯ್ಕ, ಚನ್ನನಗೌಡ, ಜವಳಿ ಮಹೇಶ, ಕಡೆಮನಿ ಸಂಗಮೇಶ, ಗೌಳಿ ಯಲ್ಲಪ್ಪ, ಜಟ್ಟಪ್ಪ, ಮುನೆಗೌಡ, ಬಂಡ್ರಿ ರಾಜು, ಬಿ. ಜಗದೀಶ, ರೇಖಾ, ಸ್ವಪ್ನಾ ಇತರರು ಇದ್ದರು.

ಜನೌಷಧಿ ಕೇಂದ್ರ ಮುಚ್ಚುವ ಕ್ರಮ ವಿರೋಧಿಸಿ ಬಿಜೆಪಿ ಪ್ರತಿಭಟನೆ:

ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸ್ಥಾಪನೆ ಮಾಡಿರುವ ಕೇಂದ್ರದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಮಂಡಲ ಬಿಜೆಪಿ ವತಿಯಿಂದ ಹೂವಿನಹಡಗಲಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ 100 ಹಾಸಿಗೆಯ ಆಸ್ಪತ್ರೆಯ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ, ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ಕೇಂದ್ರ ಸರ್ಕಾರ ಬಡವರಿಗೆ ಕಡಿಮೆ ದರದಲ್ಲಿ ಔಷಧ, ಮಾತ್ರೆಗಳು ದೊರೆಯಬೇಕೆಂಬ ಉದ್ದೇಶದಿಂದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಆರಂಭಿಸಿದೆ. ತೆರವುಗೊಳಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಈ ಕೂಡಲೇ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಈಟಿ ಲಿಂಗರಾಜ ಮಾತನಾಡಿ, ಬಡವರ ಆರೋಗ್ಯ ಸೇವೆಯನ್ನು ದುಬಾರಿ ಮಾಡಲು ಕಾಂಗ್ರೆಸ್ ಹೊರಟಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಹಣ ಹೊಂದಿಸಲು ಹೆಣಗಾಡುತ್ತಿರುವ ಈ ಸರ್ಕಾರ ಬಡವರ ಮೇಲೆ ಸವಾರಿ ಮಾಡುವುದನ್ನು ನಿಲ್ಲಿಸಬೇಕು ಎಂದು ದೂರಿದರು.

ಮುಖಂಡರಾದ ಎಚ್‌. ಪೂಜಪ್ಪ, ಜಿಲ್ಲಾ ಕಾರ್ಯದರ್ಶಿ ಐನಳ್ಳಿ ಭಾಗ್ಯಮ್ಮ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೀರಾ ಬಾಯಿ, ಬಸವರಾಜ್, ವೀರನಗೌಡ, ಎಸ್ಟಿ ಮೋರ್ಚಾ ಮಂಡಲ ಅಧ್ಯಕ್ಷ ಧಾರವಾಡ ಆಂಜನೇಯ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸಿರಾಜ್ ಬಾವಿಹಳ್ಳಿ ಮಾತನಾಡಿದರು.ಪಕ್ಷದ ಹಿರಿಯ ಮುಖಂಡರು ಮತ್ತು ಯುವ ಕಾರ್ಯಕರ್ತರು ಭಾಗವಹಿಸಿದ್ದರು.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್