ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ನಗರದ ಬಿಜೆಪಿ ಸೇವಾ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ದುಡಿದ ಪ್ರತಿಯೊಬ್ಬರನ್ನು ಸಹ ಹೊಂದಾಣಿಕೆಯಿಂದ ಬರಮಾಡಿಕೊಂಡು ಯಾವುದೇ ರೀತಿಯ ಗುಂಪುಗಾರಿಕೆ ಇಲ್ಲದೆ ಸಂಘಟನೆಯನ್ನು ನಡೆಸಿಕೊಂಡು ಹೋಗುತ್ತೇನೆ ಎಂದರು.ರಾಜ್ಯದಲ್ಲಿ 150 ಕ್ಷೇತ್ರ ಗೆಲ್ಲಬೇಕು
ಕೇಂದ್ರ ಸರ್ಕಾರದ ನೆರವನ್ನು ಪಡೆದುಕೊಂಡು ಜಿಲ್ಲೆಯಲ್ಲಿ ಐದು ಕ್ಷೇತ್ರಗಳನ್ನು ಗೆಲ್ಲಲು ಪ್ರಯತ್ನಿಸಿ ಮುಂದಿನ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದಲ್ಲಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರವು ಸಹ ಪ್ರಮುಖವಾಗಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕು. ಮುಂದಿನ ಮೂರು ವರ್ಷಗಳಲ್ಲಿ ತಳಮಟ್ಟದಿಂದ ಪ್ರತಿಯೊಂದು ಚುನಾವಣೆಯಲ್ಲಿ ಸಹ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ನಗರಸಭೆಯ ಚುನಾವಣೆಗಳಲ್ಲಿ ಪ್ರತಿಯೊಬ್ಬರನ್ನು ಒಗ್ಗೂಡಿಸಿಕೊಂಡು ಕಾರ್ಯಕರ್ತರು, ಮುಖಂಡರು ಶ್ರಮವಹಿಸಿ ಬಿಜೆಪಿಯ ನಾಯಕರನ್ನ ಮುಖಂಡರನ್ನು ಗೆಲ್ಲಿಸಿಕೊಂಡು ಬರಲಾಗುವುದೆಂದರು.ಕಾರ್ಯಕರ್ತರಿಗೆ ಬೆಂಬಲ
ರಾಜ್ಯಾಧ್ಯಕ್ಷರು ದಿನದ 24 ಗಂಟೆಯೂ ಸಹ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಅವರಂತೆ ನಾವು ಸಹ ಅವರ ನಾಯಕತ್ವದಲ್ಲಿ ಅವರ ಬೆಂಬಲದಿಂದ ಜಿಲ್ಲೆಯಲ್ಲಿ ಕೆಲಸ ಮಾಡುವಂತಹ ಸವಾಲಿದೆ ಅದನ್ನು ನಾವು ಮಾಡಿ ತೋರಿಸುತ್ತೇವೆ. ಹಳೆ ಬಿಜೆಪಿ ಕಾರ್ಯಕರ್ತರಿಗೆ ನಾನು ಈಗಾಗಲೇ ಕರೆ ಕೊಟ್ಟಿದ್ದೇನೆ. ಅವರು ನೇರವಾಗಿ ಬಂದು ನನ್ನನ್ನು ಭೇಟಿ ಮಾಡಲಿ ನಾನು ಸಹ ಅವರ ಮನೆಗೆ ಹೋಗಿ ಅವರನ್ನು ಪಕ್ಷಕ್ಕೆ ಕರೆ ತರುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲಾ ಅಧ್ಯಕ್ಷ ಸೀಕಲ್ ಆನಂದ ಗೌಡ, ನಗರಾಧ್ಯಕ್ಷ ನರೇಶ್, ಬಿಜೆಪಿ ಮುಖಂಡರಾದ ಸುರೇಂದ್ರ ಗೌಡ ,ಅರಿಕೆರೆ ಮುನಿರಾಜು, ಆಂಜನೇಯರೆಡ್ಡಿ, ನಗರಸಭೆ ಸದಸ್ಯ ನಾರಾಯಣಸ್ವಾಮಿ, ಡಾ. ಸತ್ಯನಾರಾಯಣರಾವ್ ,ಮಹಿಳಾ ಮೋರ್ಚಾ ಅಧ್ಯಕ್ಷೆ ಚಾತುರ್ಯ, ನರ್ಮದಾ ರೆಡ್ಡಿ ಸೇರಿದಂತೆ ತಾಲೂಕಿನ ಬಿಜೆಪಿ ಮುಖಂಡರು ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.