ಕನ್ನಡಪ್ರಭ ವಾರ್ತೆ ಗುಡಿಬಂಡೆ
ದೇಶದಲ್ಲಿ ಸದ್ದು ಮಾಡುತ್ತಿರುವ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಹಿ ಸಂಗ್ರಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ ಚೋರಿ ಕುರಿತಂತೆ ಘೋಷಣೆಗಳನ್ನು ಕೂಗೂತ್ತಾ ಆಕ್ರೋಶ ಹೊರಹಾಕಿದರು.ಈ ವೇಳೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಮಾತನಾಡಿ, ದೇಶದಲ್ಲಿ ಬಿಜೆಪಿ ಪಕ್ಷದವರು ಮತ ಕಳ್ಳತನದಂತ ದುಸ್ಸಾಹಕ್ಕೆ ಕೈ ಹಾಕಿದ ಪರಿಣಾಮವಾಗಿ ದೇಶದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ಬಿಹಾರ್ ಮಾತ್ರವಲ್ಲದೇ ರಾಜ್ಯದ ಹಲವು ಕಡೆ ಮತ ಕಳ್ಳತನದಂತಹ ಘಟನೆಗಳು ನಡದಿವೆ. ಬಿಜೆಪಿ ಸೇರಿದಂತೆ ಕೋಮುವಾದಿ ಪಕ್ಷಗಳು ದೇಶದಲ್ಲಿ ಅಧಿಕಾರಕ್ಕೋಸ್ಕರ ಆಯೋಗದ ಮೂಲಕ ನಡೆಸುತ್ತಿರುವ ಮತಗಳ್ಳತನ ನಿಲ್ಲಬೇಕು ಎಂದರು.
ಕಾಂಗ್ರೆಸ್ ಅಭಿಯಾನ:ಚುನಾವಣಾ ನಿಷ್ಪಕ್ಷಪಾತವಾಗಿ ಚುನಾವಣೆಗಳನ್ನು ಉದ್ದೇಶದಿಂದ ಮೂಡಿಸಲು ಪಾರದರ್ಶಕವಾಗಿ ನಡೆಸಬೇಕೆಂಬ ಜನಜಾಗೃತಿಯನ್ನು ಕಾಂಗ್ರೆಸ್ ದೇಶದಾದ್ಯಂತ ಮತಕಳವಿನ ವಿರುದ್ಧ ಚಳವಳಿ ಮಾದರಿಯಲ್ಲಿ ಅಭಿಯಾನವನ್ನು ನಡೆಸುತ್ತಿದೆ. ಈ ಅಭಿಯಾನಕ್ಕೆ ಎಲ್ಲಾ ಕಾಂಗ್ರೇಸ್ ಕಾರ್ಯಕರ್ತರು ಗ್ರಾಮಗಳಿಗೆ ಭೇಟಿ ನೀಡಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.
ಮತಗಳ್ಳತನ ಅಭಿಯಾನಪಕ್ಷದ ಮುಖಂಡ ಲಕ್ಷ್ಮೀನಾರಾಯಣ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿ ನಡೆಸುತ್ತಿರುವ ಸ್ಟಾಪ್ ಓಟ್ ಚೋರಿ ಅಭಿಯಾನಕ್ಕೆ ಬೆಂಬಲವಾಗಿ ಈ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಪ್ರಕಾಶ್, ರಾಜ್ಯ ಯೂತ್ ಕಾಂಗ್ರೇಸ್ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್ ಮತಗಳ್ಳತನದ ಕುರಿತು ಮಾತನಾಡಿದರು. ಈ ಸಮಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆದಿರೆಡ್ಡಿ, ಯೂತ್ ಕಾಂಗ್ರೇಸ್ ನ ನವೀನ್, ಅಂಬರೀಶ್, ಮುಖಂಡರಾದ ಚಾಂದ್ ಪಾಷ, ದಪ್ಪರ್ತಿ ನಂಜುಂಡ, ರಾಜೇಶ್, ರಹಮತ್, ಫಯಾಜ್ ಸೇರಿದಂತೆ ಹಲವರು ಇದ್ದರು.