ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಚಿತ್ರದುರ್ಗ ನಗರದ 15ನೇ ವಾರ್ಡನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಬಿಜೆಪಿ ಮತಗಳ್ಳತನ ವಿರುದ್ಧ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಯ ನಿಜವಾಗಿಯೂ ಮತದಾರರು ಬೆಂಬಲಿಸಿಲ್ಲ. ಅಕ್ರಮ ಮತದಾನ ದಿಂದ ಅಧಿಕಾರವನ್ನು ಹಿಡಿಯಲಾಗಿದೆ ಎಂದರು.
ಬಿಜೆಪಿ ಸೇರಿದಂತೆ ಕೋಮುವಾದಿ ಪಕ್ಷಗಳು ದೇಶದಲ್ಲಿ ಸರ್ವಾಧಿಕಾರಿ ಅಧಿಕಾರಕ್ಕೋಸ್ಕರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ಮತಗಳ್ಳತನ ನಿಲ್ಲಬೇಕು. ನಿಷ್ಪಕ್ಷಪಾತವಾಗಿ ಚುನಾವಣೆಗಳನ್ನು ನಡೆಸಬೇಕೆಂಬ ಉದ್ದೇಶದಿಂದ ಯನ್ನು ಕಾಂಗ್ರೆಸ್ ಪಕ್ಷ ದೇಶದಾದ್ಯಂತ ಕಳುವಿನ (ಚೋರಿ) ವಿರುದ್ಧ ಚಳುವಳಿ ಮಾದರಿಯಲ್ಲಿ ಅಭಿಯಾನವನ್ನು ನಡೆಸುತ್ತಿದೆ ಎಂದರು.ಚುನಾವಣೆಗಳಲ್ಲಿ ಮತಗಳವು ಮುಂದುವರೆದಲ್ಲಿ ಪ್ರಜಾಪ್ರಭುತ್ವ ಇರಲ್ಲ ಎಂಬುದನ್ನು ಮನವರಿಕೆ ಮಾಡಿಕೊಡಲಾಗುತ್ತದೆ. ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರಜಾಪ್ರಭುತ್ವ ಗೆಲ್ಲಬೇಕು. ಮತಗಳ್ಳತನದ ಮೂಲಕ ಜನಾದೇಶ ಕಗೊಲೆಯಾಗುತ್ತಿದೆ. ಇಂತಹ ಕೃತ್ಯದ ವಿರುದ್ಧ ರಾಹುಲ್ ಗಾಂಧಿ ಅವರು ಜನಜಾಗೃತಿಯ ಚಳುವಳಿ ನಡೆಸುತ್ತಿದ್ದಾರೆ. ಸಾಂವಿಧಾನಿಕ ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನು ಪ್ರತಿಯೊಬ್ಬ ಮತದಾರರು ತಮ್ಮ ಮತದ ಹಕ್ಕನ್ನು ಕದಿಯಲು, ಕಸಿಯಲು ಅವಕಾಶ ನೀಡದಂತೆ ಎಚ್ಚರಿಸಬೇಕು.ಸರ್ವಾಧಿಕಾರಿ ಧೋರಣೆಯುಳ್ಳವರ ಕೈಗೆ ಅಧಿಕಾರ ಕೊಟ್ಟರೆ ಜನರ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯದ ಹರಣವಾಗುತ್ತದೆ ಎಂದು ಚಂದ್ರಪ್ಪ ಹೇಳಿದರು.
ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಂದಿನಿಗೌಡ ಮಾತನಾಡಿ, ಎಐಸಿಸಿ ದೇಶದಾದ್ಯಂತ ವೋಟ್ ಚೋರಿ ವಿರುದ್ದ ಆಯೋಜಿಸಿರುವ ಹಕ್ಕುಗಳಿಗಾಗಿ ಸಹಿ ಸಂಗ್ರಹಣೆ ಭರದಿಂದ ಸಾಗಿದೆ. ಕೇಂದ್ರ ಸರ್ಕಾರ ಮತಗಳ್ಳತನ ನಿಲ್ಲಿಸಿ, ಪ್ರಜಾಪ್ರಭುತ್ವದ ಆಶಯಗಳ ಗೌರವಿಸಬೇಕು. ಈ ಕಾರಣಕ್ಕಾಗಿಯೇ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 20 ಸಾವಿರ ಸಹಿಗಳನ್ನು ಪಡೆಯಲಾಗುತ್ತಿದೆ. ಅಭಿಯಾನವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಸೇರಿದಂತೆ ಮುಖಂಡರು ಹಾಗೂ ನಾಯಕರು ಚುರುಕಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.