19ರಂದು ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ-ಪೂಜಾರ

KannadaprabhaNewsNetwork | Published : Apr 18, 2024 2:24 AM

ಸಾರಾಂಶ

ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ. 19ರಂದು ಹಾವೇರಿ ನಗರದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ಹಾವೇರಿ: ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ. 19ರಂದು ಹಾವೇರಿ ನಗರದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಏ.19ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಬೃಹತ್ ರೋಡ್ ಶೋ ಆರಂಭಗೊಳ್ಳಲಿದ್ದು, ಎಂ.ಜಿ. ರೋಡ್ ಮೂಲಕ ಗಾಂಧಿ ಸರ್ಕಲ್, ಜೆ.ಪಿ. ಸರ್ಕಲ್, ಪಿ.ಬಿ. ರೋಡ್ ತಲುಪಿ ನಂತರ ವಾಲ್ಮೀಕಿ ಸರ್ಕಲ್ ಮಾರ್ಗವಾಗಿ ಸಿ.ಬಿ.ಕೋಳ್ಳಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ ಖಾಲಿ ಜಾಗದಲ್ಲಿ ಸಮಾವೇಶಗೊಳ್ಳಲಿದ್ದು, ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬಿಜೆಪಿ ಮುಖಂಡರು ಮಾತನಾಡುವರು ಎಂದರು. ಈ ಬೃಹತ್ ರೋಡ್ ಶೋದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಮಾಜಿ ಸಚಿವರಾದ ಬಿ. ಶ್ರೀರಾಮಲು, ಬಿ.ಸಿ. ಪಾಟೀಲ, ಬೈರತಿ ಬಸವರಾಜ, ಮುರಗೇಶ ನಿರಾಣಿ, ಸಿ.ಸಿ. ಪಾಟೀಲ, ಕಳಕಪ್ಪ ಬಂಡಿ, ಸುನೀಲಕುಮಾರ, ಶಾಸಕರು ಮತ್ತು ಮಾಜಿ ಶಾಸಕರು, ಚಲನಚಿತ್ರ ನಟಿ ತಾರಾ ಸೇರಿದಂತಯೆ ಜಿಲ್ಲೆಯ ಜನಪ್ರತಿನಿಧಿಗಳು, ರಾಜ್ಯ ಮತ್ತು ಜಿಲ್ಲಾ, ಮಂಡಲ ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರಯ ಸೇರಿದಂತೆ ಹಾವೇರಿ-ಗದಗ ಜಿಲ್ಲೆಯ ಸುಮಾರು 60 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಶಿವರಾಜ ಸಜ್ಜನರ, ವಿರೂಪಾಕ್ಷಪ್ಪ ಬಳ್ಳಾರಿ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷೆ ಭಾರತಿ ಅಳವಂಡಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡ್ರ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಅಲ್ಲಾಭಕ್ಷ ತಿಮ್ಮಾಪೂರ, ಜಿಲ್ಲಾ ಉಪಾಧ್ಯಕ್ಷ ಸುರೇಶ ಹೊಸಮನಿ, ಬಸವರಾಜ ಕಳಸೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ, ಜಿಲ್ಲಾ ವಕ್ತಾರ ನಿರಂಜನ ಹೇರೂರ, ಮುಖಂಡರಾದ ನಾಗೇಂದ್ರ ಕಡಕೋಳ, ಪರಮೇಶಪ್ಪ ಮೇಗಳಮನಿ, ವರುಣ ಆನವಟ್ಟಿ, ದೀಪಕ ಮಡಿವಾಳರ ಇದ್ದರು.ರೋಡ್‌ ಶೋಗೆ ಉದಾಸಿ ಬರಲಿದ್ದಾರೆ: ‘ಸಂಸದ ಶಿವಕುಮಾರ ಉದಾಸಿ ಅವರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ವೈಯಕ್ತಿಕ ಕೆಲಸಗಳ ಒತ್ತಡದಿಂದ ಬಸವರಾಜ ಬೊಮ್ಮಾಯಿ ಪರ ಮತ ಪ್ರಚಾರಕ್ಕೆ ಬಂದಿಲ್ಲ. ಏ.19ರಂದು ನಡೆಯಲಿರುವ ಬೃಹತ್‌ ರೋಡ್‌ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಅರುಣಕುಮಾರ ಪೂಜಾರ ಹೇಳಿದರು.‘ಜೆಡಿಎಸ್‌ ಕಾರ್ಯಕರ್ತರನ್ನು ನಾವು ಕಡೆಗಣಿಸಿಲ್ಲ. ಯುವ ಸಮಾವೇಶಕ್ಕೂ ಕರೆದಿದ್ದೆವು. ಬೊಮ್ಮಾಯಿಯವರ ಜೊತೆ ಕೆಲವು ಪ್ರಚಾರಸಭೆಗೆ ಬಂದಿದ್ದಾರೆ. ರೋಡ್‌ ಶೋನಲ್ಲೂ ಭಾಗವಹಿಸಲಿದ್ದಾರೆ’ ಎಂದು ಪತ್ರಕರ್ತರ ಪ್ರಶ್ನೆಗೆ ಅರುಣಕುಮಾರ ಉತ್ತರಿಸಿದರು.

Share this article