ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಲೋಕಸಭೆಯ ವಿರೋಧ ಪಕ್ಷದ ನಾಯಕ್ ರಾಹುಲ್ ಅವರ ಧ್ವನಿಯನ್ನು ದಮನಿಸಲು ಕೇಂದ್ರ ಸರ್ಕಾರ ತನ್ನ ಇಲಾಖೆಗಳನ್ನು ಬಳಸಿಕೊಂಡು ಎಫ್‌ಐಆರ್ ದಾಖಲಿಸಿದೆ. ಆದರೆ ಕೇಂದ್ರ ಸರ್ಕಾರ ಇದರಲ್ಲಿ ಸಫಲವಾಗುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಲೋಕಸಭೆಯ ವಿರೋಧ ಪಕ್ಷದ ನಾಯಕ್ ರಾಹುಲ್ ಅವರ ಧ್ವನಿಯನ್ನು ದಮನಿಸಲು ಕೇಂದ್ರ ಸರ್ಕಾರ ತನ್ನ ಇಲಾಖೆಗಳನ್ನು ಬಳಸಿಕೊಂಡು ಎಫ್‌ಐಆರ್ ದಾಖಲಿಸಿದೆ. ಆದರೆ ಕೇಂದ್ರ ಸರ್ಕಾರ ಇದರಲ್ಲಿ ಸಫಲವಾಗುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರ ಮೇಲೆ ಹಾಕಲಾಗಿರುವ ಎಫ್‌ಐಆರ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಾಯಕ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು, ಅವರು ದಲಿತರು ಎಂಬ ಕಾರಣಕ್ಕೆ ಬಿಜೆಪಿ ಮತ್ತು ಸಂಘವರಿವಾರ ಶುದ್ಧೀಕರಿಸುವ ಮೂಲಕ ಇನ್ನೂ ಅಸ್ಪೃಶ್ಯತೆ ಆಚರಿಸಿದೆ ಎಂದು ಆರೋಪಿಸಿದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್ ಮಾತನಾಡಿದರು, ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ನಿವೃತ್ತ ಪ್ರಾಚಾರ್ಯ ಗಣನಾಥ ಎಕ್ಕಾರು, ಪಕ್ಷದ ಪ್ರಮುಖರಾದ ರಮೇಶ್ ಕಾಂಚನ್, ಬಿ. ನರಸಿಂಹಮೂರ್ತಿ, ಗೀತಾ ವಾಗ್ಳೆ, ಭಾಸ್ಕರ್ ರಾವ್ ಕಿದಿಯೂರು, ಮಹಾಬಲ ಕುಂದರ್, ಪ್ರಖ್ಯಾತ ಶೆಟ್ಟಿ, ಗೋಫಿನಾಥ್ ಭಟ್, ಸುರೇಶ್ ಶೆಟ್ಟಿ ಬನ್ನಂಜೆ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವರಾ, ಡಾ| ಸುನಿತಾ ಶೆಟ್ಟಿ, ಶಶಿಧರ್ ಶೆಟ್ಟಿ ಎಲ್ಲೂರು, ಸದಾನಂದ ಕಾಂಚನ್, ಗಣೇಶ್ ನೆರ್ಗಿ, ಗಣೇಶರಾಜ್ ಸರಳಬೆಟ್ಟು ಮುಂತಾದವರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.