- ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಣೆ - - - ಚನ್ನಗಿರಿ: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನತೆಗೆ ಪೊಳ್ಳು ಭರವಸೆಗಳನ್ನು ನೀಡಿ ಜನತೆಗೆ ಆಸೆ-ಆಮಿಷಗಳನ್ನು ಒಡ್ಡಿದೆ. ಆದರೂ, ರಾಜ್ಯದ ಜನತೆ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಿದ್ದಾರೆ ಎಂದರು.
ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರಾದ ರಾಜೀವ್, ಮಂಜುನಾಥ್, ಆನಂದ್, ಸುರೇಶ್, ಹರೀಶ್, ಗಣೇಶ್, ಹಾಲೇಶ್, ಮೂರ್ತಿ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.- - - -9ಕೆಸಿಎನ್‌ಜಿ2:
ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.