ಮೋದಿ ಜನ್ಮದಿನ ಅರ್ಥಪೂರ್ಣವಾಗಿ ಆಚರಿಸಿದ ಬಿಜೆಪಿ

KannadaprabhaNewsNetwork |  
Published : Sep 18, 2025, 01:12 AM IST
ಪ್ರಧಾನಿ ಮೋದಿ ಜನ್ಮದಿನ ಅರ್ಥಪೂರ್ಣವಾಗಿ ಆಚರಿಸಿದ ಬಿಜೆಪಿ | Kannada Prabha

ಸಾರಾಂಶ

ಹಲವಾರು ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಜನ್ಮದಿನದ ಶುಭಾಶಯ ಕೋರಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಸೇರಿದಂತೆ ವಿವಿಧ ರೀತಿಯ ಸೇವೆಯ ರೂಪದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಬಿಜೆಪಿ ನಗರ ಮಂಡಳ ವತಿಯಿಂದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಹಲವಾರು ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಜನ್ಮದಿನದ ಶುಭಾಶಯ ಕೋರಿದರು. 76 ಜನ ಕಾರ್ಯಕರ್ತರು ರಕ್ತದಾನ ಮಾಡಿದರು. ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಲಾಯಿತು.

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ನರೇಂದ್ರ ಮೋದಿ ನಾವು ಕಂಡ ಅದ್ಭುತ ಜನನಾಯಕ. ಕೇವಲ ಜನಸೇವೆಯನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡು ಹೋರಾಟ ಹಾಗೂ ದಿವ್ಯ ದೇಶಭಕ್ತಿಯ ಮೂಲಕ ಈ ದೇಶದ ಚುಕ್ಕಾಣಿ ಹಿಡಿದಿರುವ ಈ ಅವಧಿಯಲ್ಲಿ ಭಾರತ ಅಭಿವೃದ್ಧಿಯಲ್ಲಿ ನಾಗಾಲೋಟ ಬೀರುತ್ತಿದೆ. ಮೊನ್ನೆಯಷ್ಟೇ ಜೀವನಾವಶಕ್ಯ ವಸ್ತುಗಳನ್ನು ಜಿಎಸ್‌ಟಿಯ ಪರಿಧಿಯಲ್ಲಿ ಹೊರಗಿಡುವ ಮೂಲಕ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಕಪ್ಪುಹಣದ ಸಮರ ಸೇರಿದಂತೆ ಅನೇಕ ದಿಟ್ಟ ಹೆಜ್ಜೆಗಳನ್ನು ಇರಿಸಿದ ಮೋದಿ ನಮ್ಮ ಹೆಮ್ಮೆಯ ನಾಯಕ ಎಂದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಎಷ್ಟೋ ವರ್ಷಗಳ ಕನಸಾಗಿದ್ದ ರಾಮ ಮಂದಿರ ನಿರ್ಮಾಣ, ಕಾಶ್ಮೀರ ವಿಶೇಷ ಸ್ಥಾನಮಾನ ರದ್ಧತಿ, ನೋಟು ರದ್ಧತಿ ಮೂಲಕ ಕಪ್ಪು ಹಣದ ವಿರುದ್ಧ ಪ್ರಹಾರ, ಜನಸಾಮಾನ್ಯರಿಗೆ ತೆರಿಗೆ ಹೊರೆಯಿಂದ ಕಾಪಾಡಿದ್ದು ಮೋದಿ ಅವರ ಸಾಧನೆಗಳಲ್ಲಿ ಒಂದಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಭಾರತವನ್ನು ವಿಶ್ವಗುರುವಾಗಿಸುವ ಏಕೈಕ ಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ನರೇಂದ್ರ ಮೋದಿ ಅವರ ನಾಯಕತ್ವವನ್ನು ವಿಶ್ವವೇ ಮೆಚ್ಚಿದೆ. ನಮಗೂ ಮೋದಿ ಅವರಂತಹ ಪ್ರಧಾನಿ ಬೇಕು ಎಂದು ಅನೇಕ ರಾಷ್ಟ್ರಗಳ ಜನತೆ ಬಯಸುತ್ತಿರುವುದಕ್ಕೆ ಅವರ ಕಾರ್ಯದಕ್ಷತೆಯೇ ಸಾಕ್ಷಿ ಎಂದರು. ನಗರ ಮಂಡಳ ಅಧ್ಯಕ್ಷ ಸಂದೀಪ ಪಾಟೀಲ ಮಾತನಾಡಿ, ಪ್ರಧಾನಿ ಮೋದಿ ಅವರು ಒಬ್ಬ ವ್ಯಕ್ತಿಯಲ್ಲ ಅವರು ಒಬ್ಬ ಶಕ್ತಿ. ದೇಶಭಕ್ತಿ ಎಂದರು.

ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ, ಮೇಯರ್‌ ಎಂ.ಎಸ್.ಕರಡಿ, ಉಪಮೇಯರ್‌ ಸುಮಿತ್ರಾ ಜಾಧವ, ಮುಖಂಡರಾದಡಾ.ಸುರೇಶ ಬಿರಾದಾರ, ಚಂದ್ರಶೇಖರ ಕವಟಗಿ, ವಿಜುಗೌಡ ಪಾಟೀಲ, ಪ್ರಕಾಶ ಅಕ್ಕಲಕೋಟ, ಸ್ವಪ್ನಾ ಕಣಮುಚನಾಳ, ವಿಜಯ ಜೋಶಿ ಉಪಸ್ಥಿತರಿದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ