ಕಾರವಾರದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ

KannadaprabhaNewsNetwork |  
Published : Oct 30, 2026, 02:30 AM IST
ಕಾರವಾರದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. | Kannada Prabha

ಸಾರಾಂಶ

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಗೆಲುವಿನ ಸಂತಸ ಹಂಚಿಕೊಂಡರು.

ಕಾರವಾರ: ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಎಸ್.ವಿ. ಸಂಕನೂರ ಹಾಗೂ ರಾಜ್ಯದ ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಸಾಧಿಸಿದ ಹಿನ್ನೆಲೆ ಕಾರವಾರದ ಸವಿತಾ ಸರ್ಕಲ್‌ನಲ್ಲಿ ಗುರುವಾರ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಗೆಲುವಿನ ಸಂತಸ ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ರೂಪಾಲಿ ಎಸ್. ನಾಯ್ಕ, ವಿಧಾನಪರಿಷತ್ತಿನ ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವುದು ಸಂತಸ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಜೆಡಿಎಸ್ ನಾಯಕರ ಸಹಯೋಗದಲ್ಲಿ ನಾಲ್ಕೂ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲಾಗಿದೆ ಎಂದರು.

ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭ್ಯರ್ಥಿಯ ಪರವಾಗಿ ವ್ಯಾಪಕವಾಗಿ ಮತಯಾಚಿಸಿದ್ದರು. ಜಿಲ್ಲೆಯಲ್ಲಿ ಪ್ರಚಾರದ ಉಸ್ತುವಾರಿ ವಹಿಸಿಕೊಂಡು ಜಿಲ್ಲಾದ್ಯಂತ ಸಂಚರಿಸಿ ಸಂಕನೂರ ಪರ ಮತಯಾಚಿಸಿದ್ದೆ. ಎಲ್ಲ ನಾಯಕರ, ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಸಂಘಟಿತ ಶ್ರಮಕ್ಕೆ ಫಲ ಸಿಕ್ಕಿದೆ. ಎಲ್ಲರೂ ಒಗ್ಗಟ್ಟಿನಿಂದ ಸಂಕನೂರ ಅವರ ಗೆಲುವನ್ನು ಸಂಭ್ರಮಿಸುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ ಗುನಗಿ, ಜಿಲ್ಲಾ ಉಪಾಧ್ಯಕ್ಷ ಸಂಜಯ ಸಾಳುಂಕೆ, ನಗರಸಭೆ ಮಾಜಿ ಅಧ್ಯಕ್ಷರಾದ ರವಿರಾಜ್ ಅಂಕೋಲೆಕರ್, ಮಾಧ್ಯಮ ಸಹಾಯಕ ಕಿಶನ್ ಕಾಂಬ್ಳೆ, ವಿ.ಎಂ. ಹೆಗಡೆ, ಸುಜಾತಾ ಬಾಂದೇಕರ್, ವೈಶಾಲಿ ತಾಂಡೆಲ್, ಶಿವಾನಂದ್ ಕದಮ್, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾದವರು, ಮಾಜಿ ಜನಪ್ರತಿನಿಧಿಗಳು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು