ರಾಜಸ್ಥಾನ, ಛತ್ತೀಸ್‌ಗಡ, ಮಧ್ಯಪ್ರದೇಶ ಚುನಾವಣೆಯಲ್ಲಿ ಮೇಲುಗೈ ಹಿನ್ನೆಲೆ ಬಿಜೆಪಿ ಸಂಭ್ರಮ

KannadaprabhaNewsNetwork |  
Published : Dec 04, 2023, 01:30 AM IST
ಪೊಟೋ: 3ಎಸ್‌ಎಂಜಿಕೆಪಿ01ಶಿವಮೊಗ್ಗ ಬಿಜೆಪಿ ಕಚೇರಿ ಎದುರು ಭಾನುವಾರ ರಾಜಸ್ಥಾನ, ಛತ್ತೀಸ್‌ಗಡ ಮತ್ತು ಮಧ್ಯ ಪ್ರದೇಶ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ನಡೆದ ಸಂಭ್ರಮಾಚರಣೆಯಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾತನಾಡಿದರು.  | Kannada Prabha

ಸಾರಾಂಶ

ಶಾಸಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್‌ಘಡ ರಾಜ್ಯಗಳ ಪ್ರಜ್ಞಾವಂತ ಮತದಾರರು ಗ್ಯಾರಂಟಿಗಳಿಗೆ ಮಣಿಯದೇ, ಸಮರ್ಥ ನಾಯಕನ ಕೊರತೆ ಇರುವ, ಹಿಂದೂ ವಿರೋಧಿ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಮೋದಿ ನಾಯಕತ್ವ ಮೆಚ್ಚಿ ಮತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಮುಂದುವರಿಯಲಿದೆ ಎಂದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜಸ್ಥಾನ, ಛತ್ತೀಸ್‌ಗಡ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ ಭಾನುವಾರ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಕಚೇರಿ ಮುಂಭಾಗ ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದರು.

ಈ ಸಂದರ್ಭ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾತನಾಡಿ, ಐದು ರಾಜ್ಯದಲ್ಲಿ ಗೆಲ್ಲಲಿದ್ದೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದರು. ತೆಲಂಗಾಣ ಮಾತ್ರ ಅವರು ಗೆದ್ದಿದ್ದಾರೆ. ತೆಲಂಗಾಣದಲ್ಲಿ ಜಮೀರ್‌ ಅಹಮದ್‌ ಅವರು ಕರ್ನಾಟಕದಲ್ಲಿ ಮುಸ್ಲಿಂ ಒಬ್ಬರನ್ನ ಸ್ಪೀಕರ್‌ ಮಾಡಿದ್ದೇವೆ, 224 ಶಾಸಕರು ಅವರಿಗೆ ತಲೆ ತಗ್ಗಿಸಬೇಕಾಗಿದೆ ಎಂದು ಕೋಮುಭಾವನೆ ಕೆರಳಿಸಿದರು ಎಂದರು.

ಅಲ್ಲದೇ, ಬಿಬಿಎಂಪಿಯಲ್ಲಿ ಸಂಗ್ರಹಿಸಿದ ಕಮಿಷನ್‌ ಹಣ ತೆಲಂಗಾಣಕ್ಕೆ ಹೋಗಿದೆ. ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರ ಶ್ರಮದ ಫಲವಾಗಿ ಗೆಲುವು ಸಾಧಿಸಿದ್ದೇವೆ. ಇದೇ ರೀತಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ. ನರೇಂದ್ರ ಮೋದಿ ಪುನಃ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಶಾಸಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್‌ಘಡ ರಾಜ್ಯಗಳ ಪ್ರಜ್ಞಾವಂತ ಮತದಾರರು ಗ್ಯಾರಂಟಿಗಳಿಗೆ ಮಣಿಯದೇ, ಸಮರ್ಥ ನಾಯಕನ ಕೊರತೆ ಇರುವ, ಹಿಂದೂ ವಿರೋಧಿ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಮೋದಿ ನಾಯಕತ್ವ ಮೆಚ್ಚಿ ಮತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಮುಂದುವರಿಯಲಿದೆ ಎಂದರು.

ಈ ಸಂದರ್ಭ ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಟಿ.ಡಿ.ಮೇಘರಾಜ್‌ ಪ್ರಮುಖರಾದ ಗಿರೀಶ್‌ ಪಟೇಲ್‌ ಸೇರಿದಂತೆ ಹಲವರು ಇದ್ದರು.

- - - -3ಎಸ್‌ಎಂಜಿಕೆಪಿ01:

ಶಿವಮೊಗ್ಗ ಬಿಜೆಪಿ ಕಚೇರಿ ಎದುರು ಭಾನುವಾರ ರಾಜಸ್ಥಾನ, ಛತ್ತೀಸ್‌ಘಡ ಮತ್ತು ಮಧ್ಯಪ್ರದೇಶ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ನಡೆದ ಸಂಭ್ರಮಾಚರಣೆಯಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾತನಾಡಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ