ಹಿಂದುತ್ವ ಹೆಸರಿನಲ್ಲಿ ಜನರಿಗೆ ಬಿಜೆಪಿ ಮೋಸ: ಪ್ರಸಾದ್ ರಾಜ್

KannadaprabhaNewsNetwork |  
Published : Sep 30, 2024, 01:21 AM IST
ಪ್ರಸಾದ್29 | Kannada Prabha

ಸಾರಾಂಶ

ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಸಭೆ ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಸಭೆ ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್, ಬಿಜೆಪಿ ಪಕ್ಷವು ಹಿಂದುತ್ವದ ಹೆಸರಲ್ಲಿ ಜನರನ್ನು ಮೋಸಗೊಳಿಸಿ ಗೆಲುವನ್ನು ಸಾಧಿಸುತ್ತಿದೆ. ಈ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಈ ಬಿಜೆಪಿಯವರ ಡೋಂಗಿ ಹಿಂದುತ್ವವನ್ನು ಅವರಿಗೆ ಮನದಟ್ಟು ಮಾಡುವಂತೆ ವಿವರಿಸಿ ನಮ್ಮ ಪಕ್ಷವನ್ನು ಸಂಘಟಿಸುವ ಅವಶ್ಯಕತೆ ಇದೆ ಎಂದು ಕರೆ ನೀಡಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಮಾತನಾಡಿ, ಮುಂಬರುವ ವಿಧಾನಪರಿಷತ್, ಜಿಪಂ ಹಾಗೂ ತಾಪಂ ಚುನಾವಣೆ ಬಗ್ಗೆ ಪಂಚಾಯತ್‌ರಾಜ್ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಶ್ರಮಿಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಮುಂದಿನ ದಿನಗಳಲ್ಲಿ ಸರ್ಕಾರದ ಸಮಿತಿಗಳ ನೇಮಕಾತಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಲು ಪಕ್ಷದ, ರಾಜ್ಯದ ಹಾಗೂ ಜಿಲ್ಲೆಯ ನಾಯಕರ ಜೊತೆ ಮಾತನಾಡುವ ಭರವಸೆಯನ್ನು ಕಾರ್ಯಕರ್ತರಿಗೆ ನೀಡಿದರು.

ಸುರೇಶ್ ಶೆಟ್ಟಿ ಬನ್ನಂಜೆ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಅಧ್ಯಕ್ಷ ಆನಂದ್ ಎನ್. ಪೂಜಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶರತ್ ಶೆಟ್ಟಿ ಮತ್ತು ರೋಷನ್ ಶೆಟ್ಟಿ, ಪಂಚಾಯತ್ ರಾಜ್ ಸಂಘಟನೆ ಜಿಲ್ಲಾ ನಾಯಕಿ ಐರಿನ್ ಅಂದ್ರಾದೆ, ಉದಯ ಪೂಜಾರಿ, ಅನಿಲ್ ಕುಮಾರ್ ಹೆರ್ಗ, ತಾರಾ ಬನ್ನಂಜೆ, ಕುಮುದಾ ಕಡಿಯಾಳಿ, ಸುದೇಶ್ ಶೇಟ್, ಫೇಲಿಕ್ಸ್ ಡಿಸೋಜ, ಸದಾನಂದ ಕಿನ್ನಿಮುಲ್ಕಿ, ಅನ್ವರ್ ಕುಕ್ಕಿಕಟ್ಟಿ, ಸಂಜಯ ಆಚಾರ್ಯ, ಭಾನುಪ್ರಕಾಶ್ ಪೂಜಾರಿ, ಸತೀಶ್ ಕೊಡವೂರು, ಲಕ್ಷ್ಮಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಶೇಖರ್ ಶೆಟ್ಟಿ ಬನ್ನಂಜೆ ಸ್ವಾಗತಿಸಿದರು. ಸುರೇಶ್ ತೆಂಕನಡಿಯೂರು ವಂದಿಸಿದರು.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ