ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರಕ್ಕೆ ಬಿಜೆಪಿ ಖಂಡನೆ

KannadaprabhaNewsNetwork |  
Published : Jun 01, 2025, 01:36 AM IST
ಜನೌಷಧಿ ಕೇಂದ್ರ  ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ವಿರುದ್ಧ ಬಿಜೆಪಿ ಪ್ರತಿಭಟನೆ | Kannada Prabha

ಸಾರಾಂಶ

ಚಾಮರಾಜನಗರದ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಜನೌಷಧಿ ಕೇಂದ್ರದ ಎದುರು ಜನೌಷಧಿ ಕೇಂದ್ರಗಳ ತೆರವು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಬಿಜೆಪಿ ನಗರ ಮಂಡಲದ ವತಿಯಿಂದ ಪ್ರತಿಭಟಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜನೌಷಧಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆ ಆವರಣದಿಂದ ತೆರವು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಬಿಜೆಪಿ ನಗರ ಮಂಡಲದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಜನೌಷಧಿ ಕೇಂದ್ರದ ಎದುರು ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತ ಕೆಲಕಾಲ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಜನೌಷಧಿ ಕೇಂದ್ರಗಳು ಬಡ ಮಂದಿಗೆ ಕಡಿಮೆ ದರದಲ್ಲಿ ಔಷಧಿಗಳನ್ನು ಒದಗಿಸುತ್ತಿದೆ. ಜನರಿಗೆ ಹೆಚ್ಚು ಅನುಕೂಲವಾಗಿರುವ ಇಂತಹ ಕೇಂದ್ರಗಳನ್ನು ತೆರವುಗೊಳಿಸಲು ಜನವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.ಜನರಿಗೆ ಉಪಯೋಗವಾಗಿರುವ ಜನೌಷಧಿ ಕೇಂದ್ರಗಳನ್ನು ಮೆಡಿಕಲ್ ಲಾಬಿಗೆ ಮಣಿದು ಮುಚ್ಚುವ ಹಂತಕ್ಕೆ ಕಾಂಗ್ರೆಸ್ ಸರ್ಕಾರ ಬಂದಿದೆ. ಬಡವರ ಶಾಪ ಸರ್ಕಾರಕ್ಕೆ ತಟ್ಟಲಿದೆ. ಇದೀಗ ಬಿಜೆಪಿ ಸಾಂಕೇತಿಕ ಪ್ರತಿಭಟನೆ ಮಾಡಲಿದೆ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಜಿಲ್ಲಾ ಮಾಜಿ ಅಧ್ಯಕ್ಷ ಆರ್.ಸುಂದರ್, ಚೂಡಾ ಮಾಜಿ ಅಧ್ಯಕ್ಷ ಬಾಲಸುಬ್ರಹ್ಮಣ್ಯಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ನಗರಸಭಾ ಅಧ್ಯಕ್ಷ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹಾದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಶಿವು ವಿರಾಟ್, ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ನಗರ ಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿಗಳಾದ ಕೂಸಣ್ಣ, ಮಹೇಶ್, ನಗರಸಭಾ ಸದಸ್ಯೆ ಕುಮುದಕೇಶವಮೂರ್ತಿ, ಮಾಜಿ ಚೂಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೂರ್ಯ ಕುಮಾರ್, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಎಂಎಸ್ ಚಂದ್ರಶೇಖರ್, ಬೇಡರಪುರ ಬಸವಣ್ಣ, ಪರಶಿವಯ್ಯ,,ಮಾಜಿ ಸದಸ್ಯ ಶಿವಣ್ಣ, ಮಂಜುನಾಥ್, ರಾಮಸಮುದ್ರ ಶಿವಣ್ಣ, ನಗರ ಮಂಡಲ ಮಾಜಿ ಅಧ್ಯಕ್ಷ ನಾಗರಾಜು, ಆನಂದ್ ಭಗೀರಥ, ಕಿರಣ್, ಪರಶಿವಯ್ಯ, ಭಾಸ್ಕರ್, ಮಣಿಕಂಠ, ರುದ್ರ ,ರಮೇಶ್ ನಾಯಕ್ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ