ವಿಜಯ್ ಮಲಗಿಹಾಳ
ಒಟ್ಟು 24 ಮಂದಿ ಕಣದಲ್ಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ನ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದವರು ಹೆಸರಿಗೆ ಎಂಬಂತಿದ್ದಾರೆ. ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಮೋಹನ್ ಸ್ಪರ್ಧಿಸಿದ್ದರೆ ಕಾಂಗ್ರೆಸ್‌ನಿಂದ ಹಿರಿಯ ಕಾಂಗ್ರೆಸ್ ನಾಯಕ ಕೆ.ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್ ಕಣಕ್ಕಿಳಿದಿದ್ದಾರೆ.
ಹ್ಯಾಟ್ರಿಕ್ ಗೆಲುವನ್ನು ಸಾಧಿಸಿರುವ ಪಿ.ಸಿ.ಮೋಹನ್ ನಾಲ್ಕನೇ ಬಾರಿ ಜಯದ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರ ಪುನರ್‌ವಿಂಗಡಣೆ ಬಳಿಕ 2009ರಲ್ಲಿ ಅಸ್ತಿತ್ವಕ್ಕೆ ಬಂದ ಈ ಕ್ಷೇತ್ರದಿಂದ ಸತತವಾಗಿ ಬಿಜೆಪಿಯಿಂದ ಮೋಹನ್ ಅವರೇ ಗೆದ್ದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಈಗಿನ ಚುನಾವಣೆ ಸೇರಿದಂತೆ ಇದುವರೆಗೆ ಅಲ್ಪಸಂಖ್ಯಾತ ಸಮುದಾಯದವರನ್ನೇ ಕಣಕ್ಕಿಳಿಸಿದೆ.ಇದು ಅಲ್ಪಸಂಖ್ಯಾತರೇ ನಿರ್ಣಾಯಕರಾಗಿರುವ ಕ್ಷೇತ್ರ. ಮೇಲಾಗಿ ಮಧ್ಯಮ ಹಾಗೂ ಬಡವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕೊಳಗೇರಿಗಳಿವೆ. ಹೀಗಾಗಿಯೇ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಇಲ್ಲಿ ಹೇಗೆ ಮನ್ನಣೆ ಸಿಗಲಿದೆ ಎಂಬುದೂ ಕುತೂಹಲಕರವಾಗಿದೆ.
ಮೇಲ್ನೋಟಕ್ಕೆ ಕಾಣುವಂತೆ ಕಾಂಗ್ರೆಸ್ ನಾಯಕರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುಮಾರು 70 ಸಾವಿರ ಮತಗಳ ಅಂತರದಿಂದ ಸೋಲುಂಡಿದ್ದ ರಿಜ್ವಾನ್ ಅರ್ಷದ್ ಈಗ ಶಿವಾಜಿನಗರದ ಶಾಸಕರು. ಶಾಸಕ ಹಾಗೂ ಮಾಜಿ ಸಚಿವ ಕೆ.ಜೆ.ಜಾರ್ಜ್, ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮೊದಲಾದವರಿದ್ದಾರೆ. ಅವರೆಲ್ಲರೂ ಬಿರುಸಿನ ಕೆಲಸ ಮಾಡಿದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಾಳೆಯದಿಂದ ಒಗ್ಗಟ್ಟಿನ ಪ್ರಚಾರ ಮೇಲ್ನೋಟಕ್ಕೆ ಕಂಡು ಬರುತ್ತಿಲ್ಲ ಎನ್ನುವುದೇ ಬಿಜೆಪಿಗೆ ತುಸು ನಿಟ್ಟುಸಿರು ಬಿಡುವಂಥ ವಿಷಯ.
ಪುರುಷರು- 12,36,897
ಇತರರು- 465ಒಟ್ಟು- 23,98,910
ಅಹಿಂದ ವರ್ಗದ ಮತದಾರರು ಹೆಚ್ಚಿರುವ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ನಿರ್ಣಾಯಕರಾಗಿದ್ದಾರೆ. ಅವರನ್ನು ಹೊರತುಪಡಿಸಿದರೆ ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತಮಿಳು ಭಾಷಿಕರಲ್ಲಿ ಕ್ರಿಶ್ಚಿಯನ್ನರೂ ಸೇರಿದ್ದಾರೆ. ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡು ಮೀಸಲು ಕ್ಷೇತ್ರಗಳಿವೆ ಎನ್ನುವುದು ಗಮನಾರ್ಹ. ಇನ್ನುಳಿದಂತೆ ಜೈನರು, ಗುಜರಾತಿಗಳೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಅಭ್ಯರ್ಥಿಗಳ ಪರಿಚಯ:1.ಪಿ.ಸಿ.ಮೋಹನ್- ಇದೇ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಇದಕ್ಕೂ ಮುನ್ನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ 2009, 2014 ಮತ್ತು 2019 ಲೋಕಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇತರ ಹಿಂದುಳಿದ ವರ್ಗಕ್ಕೆ ಸೇರಿದ ಮೋಹನ್ ಅವರು ಹೆಚ್ಚು ಸದ್ದು ಗದ್ದಲವಿಲ್ಲದೆ ರಾಜಕಾರಣ ಮಾಡುವ ವ್ಯಕ್ತಿ ಎಂದೇ ಹೆಸರಾಗಿದ್ದಾರೆ.
2019ರ ಚುನಾವಣಾ ಫಲಿತಾಂಶ: