ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಕ್ಕೆ ಅನ್ಯಾಯವಾದಾಗಲೆಲ್ಲ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಿದ್ದಾರೆ. ಅವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯಪಾಲರಿಗೆ ನೂರು ಪುಟಗಳ ದಾಖಲೆ ಕೊಟ್ಟಿದ್ದಾರೆ. ರಾಜ್ಯಪಾಲರು ಅದನ್ನು ಪೂರ್ಣ ಅಭ್ಯಾಸ ಮಾಡಲು ಸಮಯ ಬೇಕು. ಆದರೆ, ರಾಜ್ಯಪಾಲರು ಎರಡು ಗಂಟೆಯಲ್ಲಿ ಓದಿ ಸಿದ್ದರಾಮಯ್ಯನವರಿಗೆ ಬಿಜೆಪಿ ನೋಟಿಸ್ ಕೊಡಿಸಿದೆ ಎಂದು ದೂರಿದರು.
ಬಿಜೆಪಿಗೆ ಕಾನೂನು ಎನ್ನುವುದೇ ಇಲ್ಲ. ಶೇ.95ರಷ್ಟು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದು ಬಿಜೆಪಿ. ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿದರು. ಈಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬಂಧಿಸಲು ರಾಜಭವನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಮುಡಾ 50-50 ಸ್ಕೀಂ ತೆಗೆದುಕೊಂಡು ಬಂದವರೇ ಬಿಜೆಪಿಯವರು. ಅದನ್ನು ರದ್ದು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಸಿದ್ದರಾಮಯ್ಯ ಕಳಂಕ ರಹಿತ ರಾಜಕಾರಣಿ, ಅವರಿಗೆ ಕಪ್ಪುಮಸಿ ಬಳಿಯಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಹೇಳಿದರು.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಯಾವುದೇ ತಪ್ಪಿಲ್ಲ. ಮುಡಾ ನಿವೇಶನಗಳು ಜೆಡಿಎಸ್ ಶಾಸಕರಿಗೂ ಹಂಚಿಕೆಯಾಗಿದೆ. ಅದಕ್ಕೆ ಹೋರಾಟದಿಂದ ಹಿಂದೇಟು ಹಾಕಿದ್ದ ಜೆಡಿಎಸ್‌ಗೆ ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಜೆಡಿಎಸ್ ಪಾಲ್ಗೊಂಡಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸರ್ಕಾರಿ ದಾಖಲೆಗಳನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಮೈಸೂರು ಪಾದಯಾತ್ರೆ ಮಾಡುವ ನೈತಿಕತೆ ವಿಜಯೇಂದ್ರಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಡಿಯೂರಪ್ಪ, ವಿಜಯೇಂದ್ರ ಹಾಗೆ ರಾಜಕೀಯ ಮಾಡಿಲ್ಲ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ. ರಾಜಕೀಯವಾಗಿ ಇದನ್ನು ಸದೃಢವಾಗಿ ಸಿದ್ದರಾಮಯ್ಯ ಎದುರಿಸಿ ಮತ್ತಷ್ಟು ಗಟ್ಟಿಶಾಲಿಯಾಗಿ ಮುಂದುವರೆಯುತ್ತಾರೆ ಎಂದು ಸಮರ್ಥಿಸಿಕೊಂಡರು.