ಬಿಜೆಪಿ ಐಟಿ ಸೆಲ್ ಜನರ ದಿಕ್ಕು ತಪ್ಪಿಸುತ್ತಿದೆ । ಅಮೆರಿಕಾದಲ್ಲಿ ರಾಹುಲ್ ಗಾಂಧಿ ಹೇಳಿಕೆ ತಿರುಚಲಾಗುತ್ತಿದೆ
- ನೆಹರೂ ಮೀಸಲಾತಿ ವಿರೋಧಿಸಿದ್ದರೆಂದು ಬಿಜೆಪಿ ಅಪಪ್ರಚಾರ
- 1998 ರಲ್ಲಿ ಎಸ್.ಸಿ-ಎಸ್.ಟಿಗೆ ಶೇ 20 ರಷ್ಟು ಮೀಸಲಾತಿ- ವಾಜಪೇಯಿ ಪ್ರಧಾನಿಯಾಗಿದ್ದಾಗ ಮೀಸಲಾತಿ ಪರಿಷ್ಕರಣೆಗೆ ಪ್ರಸ್ತಾಪ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ
ಶನಿವಾರ ಬಿ.ಎಚ್.ಕೈಮರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಐಟಿ ಸೆಲ್ ಜನರ ದಿಕ್ಕು ತಪ್ಪಿಸುತ್ತಿದೆ. ಅಮೆರಿಕಾ ದಲ್ಲಿ ರಾಹುಲ್ ಗಾಂಧಿ ಮೀಸಲಾತಿ ವಿಚಾರದಲ್ಲಿ ಹೇಳಿರುವುದನ್ನು ತಿರುಚಿ ತದ್ವಿರುದ್ಧವಾಗಿ ಬಿಂಬಿಸಲಾಗುತ್ತಿದೆ. ನೆಹರೂ ಅವರು ಮೀಸಲಾತಿಗೆ ವಿರುದ್ಧವಾಗಿದ್ದರು ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಇತಿಹಾಸ ತಿರುಚುತ್ತಿದ್ದಾರೆ. ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳದೆ ಜನರಲ್ಲಿ ತಪ್ಪು ಸಂದೇಶ ನೀಡುತ್ತಿದ್ದಾರೆ. ಇತಿಹಾಸ ಬಲ್ಲವನು ಮಾತ್ರ ಇತಿಹಾಸ ಸೃಷ್ಟಿಸಬಲ್ಲರು ಎಂದರು.
1998 ರಲ್ಲಿ ಎಸ್.ಸಿ ಹಾಗೂ ಎಸ್.ಟಿ ಅವರಿಗೆ ಶೇ 20 ರಷ್ಟು ಮೀಸಲಾತಿ ತರಲಾಗಿತ್ತು. ರಾಹುಲ್ ಗಾಂಧಿ ಅವರು 10 ಸಾವಿರ ಕೆ.ಪಿ. ಜೋಡೋ ಪಾದಯಾತ್ರೆ ನಡೆಸಿ ಶೇ 50 ರಿಂದ 75 ರಷ್ಟು ಮೀಸಲಾತಿ ತಂದು ಎಲ್ಲರಿಗೂ ಸಮಾನ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದರು. ಆದರೆ, ಬಿಜೆಪಿಯ ರಾಮಜೋಯಿಸ್ ಎಂಬುವರು ಮೀಸಲಾತಿ ಕಡಿಮೆ ಮಾಡಬೇಕು ಎಂದು ನ್ಯಾಯಾಲಯದ ಮೆಟ್ಟಲೇರಿದ್ದರು. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಸುದರ್ಶನ್ ಮೀಸಲಾತಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಸಂವಿಧಾನ ಬದಲಾಯಿಸುವ ಮಾತನಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ, ಗುಬ್ಬಿಗಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ಶಂಕರ್, ಕಾಂಗ್ರೆಸ್ ಪಕ್ಷದ ಮುಖಂಡ ಶಿವಣ್ಣ ಇದ್ದರು.