ಬಿಜೆಪಿ ನಿಯೋಗ, ಐದು ಸಾವಿರ ಭಕ್ತರ ಧರ್ಮಸ್ಥಳ ಭೇಟಿ

KannadaprabhaNewsNetwork |  
Published : Aug 26, 2025, 01:06 AM IST
ಬಿಜೆಪಿ ಜನಪ್ರತಿನಿಧಿಗಲು ಹಾಗೂ ಭಕ್ತರು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ಶಿವಪಂಚಾಕ್ಷರಿ ಪಠಣ ಹಾಗೂ ಹೆಗ್ಗಡೆ ಅವರ ಭೇಟಿ ಮಾಡಿದ ನಿಯೋಗ | Kannada Prabha

ಸಾರಾಂಶ

ಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಸುರತ್ಕಲ್, ಉಳ್ಳಾಲ ಹಾಗೂ ಬೆಳ್ತಂಗಡಿ ತಾಲೂಕುಗಳಿಂದ ಸುಮಾರು ಐದು ಸಾವಿರ ಮಂದಿ ಭಕ್ತಾದಿಗಳು ಹಾಗೂ ಅಭಿಮಾನಿಗಳು ಬಿಜೆಪಿ ಜನಪ್ರತಿನಿಧಿಗಳೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು.

ಬೆಳ್ತಂಗಡಿ: ದೇವರ ಅನುಗ್ರಹದಿಂದ ಸತ್ಯದ ಅನಾವರಣವಾಗುತ್ತಿರುವುದು ಸಂತಸವಾಗಿದೆ. ಧರ್ಮಸ್ಥಳಧ ಭಕ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಶ್ರದ್ಧಾ-ಭಕ್ತಿಯ ಪ್ರೋತ್ಸಾಹದಿಂದ ಎಲ್ಲಾ ಸೇವಾ ಕಾರ್ಯಗಳನ್ನು ಮುಂದುವರಿಸುವ ಉತ್ಸಾಹ ಮೂಡಿಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಸುರತ್ಕಲ್, ಉಳ್ಳಾಲ ಹಾಗೂ ಬೆಳ್ತಂಗಡಿ ತಾಲೂಕುಗಳಿಂದ ಸುಮಾರು ಐದು ಸಾವಿರ ಮಂದಿ ಭಕ್ತಾದಿಗಳು ಹಾಗೂ ಅಭಿಮಾನಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಶ್ರದ್ಧಾ ಭಕ್ತಿಯಿಂದ ಗೌರವಾರ್ಪಣೆ ಮಾಡಿದರು.ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಎಲ್ಲರೂ ದೇವಸ್ಥಾನದ ಎದುರು ಸಾಮೂಹಿಕವಾಗಿ ‘ಶಿವಪಂಚಾಕ್ಷರಿ ಪಠಣ’ ಮಾಡಿದರು.

 ನಂತರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್‌ಕುಮಾರ್ ಕಟೀಲು, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಶಾಸಕರಾದ ಹರೀಶ್ ಪೂಂಜ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್‌, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಹರಿಕೃಷ್ಣ ಬಂಟ್ವಾಳ, ಮೂಡುಬಿದಿರೆಯ ಡಾ.ಎಂ. ಮೋಹನ ಆಳ್ವ, ಕೆ.ಪಿ. ಜಗದೀಶ್ ಅಧಿಕಾರಿ, ವಕೀಲ ಬಾಹುಬಲಿ ಪ್ರಸಾದ್, ಕೃಷ್ಣರಾಜ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಸಿ.ಟಿ.ರವಿ ‘ಪಾಕ್‌ ನಾಲಿಗೆ’ ಹೇಳಿಕೆಗೆ ಸದನವೇ ಬಲಿ
ಗುತ್ತಿಗೆದಾರರಿಂದಲೇ ಕಮಿಷನ್‌ ಕೇಳಿದ ಗುತ್ತಿಗೆದಾರರು! : ಇಬ್ಬರು ಅಮಾನತು