ಕನ್ನಡಪ್ರಭ ವಾರ್ತೆ ಮಂಗಳೂರು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನಸಭೆ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಆಗಮಿಸಿದ್ದರು.ಸಂಸದರು, ಪಕ್ಷದ ಶಾಸಕರು ಮತ್ತು ಪಕ್ಷದ ಮುಖಂಡರ ಜತೆ ಸಭೆ ನಡೆಸಿ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ನಿಯೋಗ ಮಾಹಿತಿ ಪಡೆಯಿತು. ಸಂಘನಿಕೇತನದಲ್ಲಿ ಸುಹಾಸ್ ಹೆತ್ತವರು, ಹಿಂದೂ ಸಂಘಟನೆಗಳ ಕಾರ್ಯಕರ್ತರ ಜತೆ ಸಭೆ ನಡೆಸಿ ಮಾಹಿತಿ ಪಡೆದರು.
ಬಳಿಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು, ರಾತ್ರಿ ವೇಳೆ ಕಿರುಕುಳ ನೀಡುತ್ತಿರುವುದು ಇತ್ಯಾದಿ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಜಿಲ್ಲೆಯ ಸಂಸದರು, ಶಾಸಕರು ಇದ್ದರು.