ಡಿ.ಕೆ.ಶಿವಕುಮಾರ್ ತಕ್ಷಣ ರಾಜೀನಾಮೆ ನೀಡುವಂತೆ ಬಿಜೆಪಿ ಆಗ್ರಹ

KannadaprabhaNewsNetwork | Published : Mar 26, 2025 1:38 AM

ಸಾರಾಂಶ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಸ್ಲಿಂ ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುವುದಾಗಿ ನೀಡಿದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆಮುಧೋಳ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಸ್ಲಿಂ ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುವುದಾಗಿ ನೀಡಿದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ನಗರದ ರನ್‌ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಯಾದವಾಡ ವೃತ್ತದಲ್ಲಿ ಡಿ.ಕೆ.ಶಿವಕುಮಾರ್‌ ಅವರ ಪ್ರತಿಕೃತಿ ದಹನ ದಹಿಸಿದರು. ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಬಿಜೆಪಿ ಗ್ರಾಮೀಣ ಅಧ್ಯಕ್ಷ ಸಂಗನಗೌಡ ಕಾತರಕಿ ಮಾತನಾಡಿ, ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಿರುವುದು ಅಸಂವಿಧಾನಿಕ ನಡೆ. ರಾಜ್ಯ ಸರ್ಕಾರ ಜಾತಿ-ಜಾತಿಗಳ ನಡುವೆ ಜಗಳ ಹಚ್ಚುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಸಚಿವರು, ಶಾಸಕರ ವಿರುದ್ಧ ಹನಿಟ್ರ್ಯಾಪ್ ಮಾಡುತ್ತಿರುವುದು ನಾಚಿಗೇಡಿತನದ ಸಂಗತಿ ಎಂದು ದೂರಿದರು.

ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಗುರುಪಾದ ಕುಳಲಿ ಮಾತನಾಡಿ, ಡಾ.ಅಂಬೇಡ್ಕರ್ ರಚಿಸಿರುವ ಸಂವಿಧಾನದ ಶೆಡ್ಯೂಲ್ ನಲ್ಲಿ ಇಲ್ಲದ ಜನರಿಗೆ ಮೀಸಲಾತಿ ಕಲ್ಪಿಸುವ ಮೂಲಕ ಸಂವಿಧಾನಕ್ಕೆ ಅಪಮಾನ ಮಾಡುತ್ತಿದೆ. ಮೇಲ್ನೋಟಕ್ಕೆಗುತ್ತಿಗೆಗಳಲ್ಲಿ ಶೇ.4ರಷ್ಟು ಮೀಸಲಾತಿಯ ಎಂದರೂ ಮೀಸಲಾತಿ ಚರ್ಚೆಗೆ ಧಕ್ಕೆ ತರುವಂತಹ ಹುನ್ನಾರಕ್ಕೆ ರಾಜ್ಯ ಸರ್ಕಾರ ಕೈ ಹಾಕಿದೆ. ಮುಸ್ಲಿಮರಿಗೆ ಮೀಸಲಾತಿ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ಬಿಜೆಪಿ ನಗರ ಅಧ್ಯಕ್ಷ ಕೆ.ಎಸ್. ಹಿರೇಮಠ ಮಾತನಾಡಿ,ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವಿನ ಆಂತರಿಕ ಜಗಳ ಮರೆಮಾಚಲು ಮೀಸಲಾತಿ ವಿಷಯ ತಂದಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡರಾದ ನಾಗಪ್ಪ ಅಂಬಿ, ರಾಜೇಂದ್ರ ಟಂಕಸಾಲಿ ಸೇರಿದಂತೆ ಇತರರು ಮಾತನಾಡಿದರು.

ಬಿಜೆಪಿ ಮುಖಂಡರಾದ ಕೆ.ಆರ್.ಮಾಚಪ್ಪನವರ, ಹನಮಂತ ತುಳಸಿಗೇರಿ, ಸದಾಶಿವ ತೇಲಿ, ಕಲ್ಲಪ್ಪ ಸಬರದ, ಅನಂತ ಘೋರ್ಪಡೆ, ಸದಾಶಿವ ಇಟಕನ್ನವರ, ಡಾ.ರವಿ ನಂದಗಾಂವ, ಕಲ್ಮೇಶ ಗೋಸಾರ, ಶ್ರೀಶೈಲ ಚಿನ್ನಣ್ಣವರ, ನಾಗಪ್ಪಾ ಅಂಬಿ, ಸಂತೋಷ ಘೋರ್ಪಡೆ, ರಾಘು ಶಿಂಧೆ, ಶಂಕರ ನಾಯಿಕ, ಪಿ.ಡಿ.ಕುಂಬಾರ ಹಾಗೂ ಯುವಕರು ಕಾರ್ಯಕರ್ತರು ಭಾಗವಹಿಸಿದ್ದರು.

Share this article