ಕೋಚಿಮುಲ್ ಒಕ್ಕೂಟ ಅಮಾತಿಗೆ ಬಿಜೆಪಿ ಆಗ್ರಹ

KannadaprabhaNewsNetwork |  
Published : Jan 14, 2024, 01:30 AM ISTUpdated : Jan 14, 2024, 02:49 PM IST
ಸಿಕೆಬಿ-5 ಸುದ್ದಿಗೋಷ್ಠಿಯಲ್ಲಿ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿದರು | Kannada Prabha

ಸಾರಾಂಶ

ಇಡಿ ತನಿಖೆ ನಡೆಸಿದಾಗ 35-40 ಜನರ ಬಳಿ 20-30 ಲಕ್ಷ ರು. ಪಡೆದಿರುವುದು ನಿಜ ಎಂದು ಆಯ್ಕೆ ಸಮಿತಿಯವರು ಒಪ್ಪಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಇದರಲ್ಲಿ  ಕೆ.ವೈ. ನಂಜೇಗೌಡರು ತಮ್ಮ ಆಪ್ತರಿಗೆ ಗೋಮಾಳ ಜಮೀನು ಮಂಜೂರು ಮಾಡಿರುವುದನ್ನು ತಿಳಿಸಲಾಗಿದೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕೋಚಿಮುಲ್‌ ಅಧ್ಯಕ್ಷ ಹಾಗೂ ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಕೋಚಿಮುಲ್‌ ಒಕ್ಕೂಟವನ್ನು ಅಮಾನತಿನಲ್ಲಿಡಬೇಕೆಂದು ಬಿಜೆಪಿ ಮುಖಂಡರು ಒತ್ತಾಯಿಸಿದರು. ಸ್ಥಳೀಯ ಶಾಸಕ ಪ್ರದೀಪ್‌ ಈಶ್ವರ್‌ ಬಾಲಿಶ ವರ್ತನೆ ಬಿಟ್ಟು ಅಭಿವೃದ್ಧಿ ಯೋಜನೆಗಳನ್ನು ತರಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮಾಜಿ ಅಧ್ಯಕ್ಷ ಕೆ.ವಿ. ನಾಗರಾಜ್, ಕೋಚಿಮುಲ್‌ನಲ್ಲಿ ಪ್ರತಿಭಾವಂತರಿಗೆ ಅವಕಾಶ ಸಿಗುತ್ತಿಲ್ಲ ಎಂಬ ಆರೋಪ ಬಂದಾಗ ಯಾರೂ ನಂಬಿರಲಿಲ್ಲ. ಈಗ ಅದಕ್ಕೆ ದಾಖಲಾತಿಗಳು ದೊರೆತಿವೆ ಎಂದರು.

ಭ್ರಷ್ಟಾಚಾರ ನಡೆದಿರುವುದು ನಿಜ: ಇಡಿ ತನಿಖೆ ನಡೆಸಿದಾಗ 35-40 ಜನರ ಬಳಿ 20-30 ಲಕ್ಷ ರು. ಪಡೆದಿರುವುದು ನಿಜ ಎಂದು ಆಯ್ಕೆ ಸಮಿತಿಯವರು ಒಪ್ಪಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಇದರಲ್ಲಿ ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡರು ತಮ್ಮ ಆಪ್ತರಿಗೆ ಗೋಮಾಳ ಜಮೀನು ಮಂಜೂರು ಮಾಡಿರುವುದನ್ನು ತಿಳಿಸಲಾಗಿದೆ ಎಂದರು.

ಪ್ರದೀಪ್‌ ಈಶ್ವರ್‌ ವರ್ತನೆ ಬಾಲಿಶ:  ಶಾಸಕ ಪ್ರದೀಪ್‌ ಈಶ್ವರ್‌ ಕೆಲಸ ಮಾಡುವುದನ್ನು ಬಿಟ್ಟು ಬಾಲಿಶವಾಗಿ ವರ್ತಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೊಸ ಅಭಿವೃದ್ಧಿ ಯೋಜನೆಗಳು ನಡೆದಿಲ್ಲ. ಆಗಲೇ ಸಂಸದನಾಗಿ ಸ್ಪರ್ಧಿಸುತ್ತೇನೆ ಎಂದು ಶಾಸಕ ಪ್ರದೀಪ್‌ ಹೇಳಲಾರಂಭಿಸಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಮೋದಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ, ಮುಖಂಡರಾದ ಚಿನ್ನಪ್ಪ ರೆಡ್ಡಿ, ವೆಂಕಟನಾರಾಯಣ್, ಪಿ.ಎ. ಮೋಹನ್, ಹನುಮೇಗೌಡ, ಗಿರೀಶ್, ಅಗಲಗುರ್ಕಿ ಚಂದ್ರಶೇಖರ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ