ಧರ್ಮಸ್ಥಳ ಬಗ್ಗೆ ಅವಹೇಳನ ಪೋಸ್ಟ್‌ ವಿರುದ್ಧ ಸುಮೋಟೋ ಕೇಸ್‌ಗೆ ಬಿಜೆಪಿ ಆಗ್ರಹ

KannadaprabhaNewsNetwork |  
Published : Aug 20, 2025, 02:00 AM IST
ಸತೀಶ್‌ ಕುಂಪಲ ಸುದ್ದಿಗೋಷ್ಠಿ  | Kannada Prabha

ಸಾರಾಂಶ

ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ಗಳು ಹರಿದಾಡುತ್ತಿದ್ದು, ಇದರ ವಿರುದ್ಧ ಪೊಲೀಸರು ಸ್ವಯಂ ಆಗಿ ಕೇಸು ದಾಖಲಿಸುವಂತೆ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರುಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ಗಳು ಹರಿದಾಡುತ್ತಿದ್ದು, ಇದರ ವಿರುದ್ಧ ಪೊಲೀಸರು ಸ್ವಯಂ ಆಗಿ ಕೇಸು ದಾಖಲಿಸದೆ ಸುಮ್ಮನಾಗಿರುವುದು ಖೇದಕರ. ಇದು ಸರ್ಕಾರದ ಹಿಂದುಗಳ ಶ್ರದ್ಧಾಕೇಂದ್ರಗಳ ಮೇಲೆ ಪ್ರಹಾರ ಉಂಟಾದಾಗ ತಾರತಮ್ಯ ನೀತಿ ಅನುಸರಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಆರೋಪಿಸಿದ್ದಾರೆ.

ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ತಿಂಗಳ ಹಿಂದೆ ಈ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆದಾಗ ಹಿಂದುಗಳ ಮೇಲೂ ಪೊಲೀಸರು ಸ್ವಯಂ ಆಗಿ ಕೇಸು ದಾಖಲಿಸಿದ್ದಾರೆ. ಈಗ ಅದೇ ಹಿಂದುಗಳ ಧಾರ್ಮಿಕ ನಂಬಿಕೆಯ ದೇವಸ್ಥಾನಗಳ ವಿರುದ್ಧ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕುತ್ತಿದ್ದರೂ ದ.ಕ. ಪೊಲೀಸರು ಯಾಕೆ ಸುಮ್ಮನೆ ಇದ್ದಾರೆ? ಈ ಹಿಂದೆ ಕೊರಗಜ್ಜನ ಕಟ್ಟೆಗೆ ಅವಮಾನ ಆದಾಗ ಕೂಡ ಬಿಜೆಪಿ ಹೋರಾಟ ನಡೆಸಿತ್ತು. ಹಿಂದು ಧಾರ್ಮಿಕ ಕೇಂದ್ರಗಳಿಗೆ ತೊಂದರೆಯಾದಾಗ ಬಿಜೆಪಿ ನ್ಯಾಯಕ್ಕಾಗಿ ಹೋರಾಟ ನಡೆಸಲಿದೆ ಎಂದರು.

ಅನಾಮಿಕನ ಮಂಪರು ಪರೀಕ್ಷೆ ನಡೆಸಿ:

ಧರ್ಮಸ್ಥಳ ಗ್ರಾಮದಲ್ಲಿ ಅನಾಥ ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಿ ಎಸ್‌ಐಟಿ ತನಿಖೆಗೆ ಕಾರಣರಾಗಿರುವ ಅನಾಮಿಕನ ಬಗ್ಗೆ ಶಂಕೆ ಇದೆ. ಆದ್ದರಿಂದ ಆತನ ಮಂಪರು ಪರೀಕ್ಷೆ ನಡೆಸಬೇಕು. ಇಡೀ ಪ್ರಕರಣದ ಹಿಂದೆ ಎಡಪಂಥೀಯರ ಹುನ್ನಾರದ ಶಂಕೆ ಬಲವಾಗಿದೆ. ಹಾಗಾಗಿ ಎಸ್‌ಐಟಿ ತನಿಖೆಯ ಬಗ್ಗೆ ಮಧ್ಯಂತರ ವರದಿ ಬಹಿರಂಗಪಡಿಸಬೇಕು. ಜನತೆಗೆ ಇರುವ ಗೊಂದಲವನ್ನು ನಿವಾರಿಸಬೇಕು ಎಂದು ಅವರು ಒತ್ತಾಯಿಸಿದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ವಿರುದ್ಧ ಕೂಡ ಜಾಲತಾಣಗಳಲ್ಲಿ ಅವಹೇಳನ ಪೋಸ್ಟ್‌ಗಳು ಕಂಡುಬರುತ್ತಿದ್ದು, ಇದರ ವಿರುದ್ಧವೂ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಮುಖಂಡರಾದ ಪ್ರೇಮಾನಂದ ಶೆಟ್ಟಿ, ಯತೀಶ್‌ ಆರ್ವಾರ್‌, ಸಂಜಯ ಪ್ರಭು, ಅರುಣ್‌ ಶೇಟ್‌, ಸುಧಾಕರ್ ಅಡ್ಯಾರ್‌, ಮಹೇಶ್, ವಸಂತ ಪೂಜಾರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ