ಹೊನ್ನಾಳಿಯಲ್ಲಿ ಭತ್ತಕ್ಕೆ ಬೆಂಬಲ ಬೆಲೆ ನೀಡಲು ಬಿಜೆಪಿ ಆಗ್ರಹ, ಪ್ರತಿಭಟನೆ

KannadaprabhaNewsNetwork |  
Published : Nov 19, 2025, 12:15 AM IST
ಹೊನ್ನಾಳಿ ಫೋಟೋ 18 ಎಚ್.ಎಲ್.ಐ1ಎ. ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದಿಂದ ಪ್ರತಿಭಟನೆ ಹಾಗೂ ಬಂದ್ ಆಚರಿಸಿದ ವೇಳೆ ಮಂಗಳವಾರ ಬೆಳಗ್ಗೆಯೇ ಸರ್ಕಲ್ ನಲ್ಲಿ ಟೈರ್ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  | Kannada Prabha

ಸಾರಾಂಶ

ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ಬೆಲೆಗೆ ಹಾಗೂ ಖರೀದಿ ಕೇಂದ್ರಗಳನ್ನು ತೆರೆಯುವಂತೆ ತೆರೆಯುವಂತೆ ಆಗ್ರಹಿಸಿ ಹಾಗೂ ಅವಳಿ ತಾಲೂಕಿನಲ್ಲಿ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ತಾಲೂಕು ಬಿಜೆಪಿ ಘಟಕ ನಡೆಸಿದ ಪ್ರತಿಭಟನೆ, ಬಂದ್ ಯಶಸ್ವಿಯಾಯಿತು.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ಬೆಲೆಗೆ ಹಾಗೂ ಖರೀದಿ ಕೇಂದ್ರಗಳನ್ನು ತೆರೆಯುವಂತೆ ತೆರೆಯುವಂತೆ ಆಗ್ರಹಿಸಿ ಹಾಗೂ ಅವಳಿ ತಾಲೂಕಿನಲ್ಲಿ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ತಾಲೂಕು ಬಿಜೆಪಿ ಘಟಕ ನಡೆಸಿದ ಪ್ರತಿಭಟನೆ, ಬಂದ್ ಯಶಸ್ವಿಯಾಯಿತು.

ಈ ಮಧ್ಯೆ ಸಾರ್ವಜನಿಕರ ಮನವಿ ಮೇರೆಗೆ ಶಾಸಕ ಡಿ.ಜಿ.ಶಾಂತನಗೌಡ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಸಂಗೊಳ್ಳಿರಾಯಣ್ಣ ವೃತ್ತಕ್ಕೆ ಆಗಮಿಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಪಡಿಸಿರುವುದು ಹಾಗೂ ಶಾಲಾ ಕಾಲೇಜುಗಳನ್ನು ಮುತ್ತುವಂತೆ ಒತ್ತಾಯಪಡಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿ ಕೂಡಲೇ ಇವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಎಸ್‌ಪಿ ಸ್ಯಾಮ್ ವರ್ಗಿಶ್ ಅವರಿಗೆ ಆಗ್ರಹಿಸಿದರು. ಈ ನಡುವೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟ, ನೂಕಾಟ ನಡೆದು ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಯಿತು.

ಬಂದ್ ಹೆಸರಿನಲ್ಲಿ ಬಿಜೆಪಿಯವರು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂದ ಶಾಸಕ ಡಿ.ಜಿ.ಶಾಂತನಗೌಡ, ಎಚ್.ಬಿ.ಮಂಜಪ್ಪ, ಕಾರ್ಯಕರ್ತರು ಎಂ.ಪಿ.ರೇಣುಕಾಚಾರ್ಯ, ಮುಖಂಡರನ್ನು ಕೂಡಲೇ ಬಂಧಿಸಿ ಎಂದು ಪೊಲೀಸರನ್ನು ಒತ್ತಾಯಿಸಿದರೆ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಕಾರ್ಯಕರ್ತರು ತಾವು ನಡೆಸುತ್ತಿರುವ ಶಾಂತಿಯುತ ಬಂದ್‌ಗೆ ಕಾಂಗ್ರೆಸ್‌ನವರು ಅಡ್ಡಿಪಡಿಸುತ್ತಿದ್ದಾರೆ ತಕ್ಷಣ ಕಾಂಗ್ರೆಸ್ ಮುಖಂಡರನ್ನು ಬಂಧಿಸಬೇಕು ಎಂದು ಪೊಲೀಸರನ್ನು ಒತ್ತಾಯಿಸಿದರು. ಕಾಂಗ್ರೆಸ್‌ನವರು ಬಸ್‌ಗಳನ್ನು ಪಟ್ಟಣದ ಒಳಗೆ ಬರಲು ಅವಕಾಶ ಮಾಡಿಕೊಡುತ್ತಿದ್ದಂತೆ ಬಿಜೆಪಿ ಮುಖಂಡರು ಕೆರಳಿ ಬಸ್‌ಗಳನ್ನು ಒಳಗೆ ಬರದಂತೆ ತಡೆಯುತ್ತಿದ್ದುದ್ದು ಕಂಡು ಬಂದಿತು.

ಈ ನಡುವೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಕಾರ್ಯಕರ್ತರು ಟ್ರ್ಯಾಕ್ಟರ್‌ನಲ್ಲಿದ್ದ ಮೆಕ್ಕೆಜೋಳವನ್ನು ರಸ್ತೆಗೆ ಹಾಕಿ ಮೆಕ್ಕೆಜೋಳಕ್ಕೆ ಬಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಮತ್ತೆ ಮೆಕ್ಕೆಜೋಳವನ್ನು ಟ್ರ್ಯಾಕ್ಟರ್‌ಗೆ ತುಂಬಿಸಲು ಪೊಲೀಸರು ಹರಸಹಾಸ ಪಡಬೇಕಾಯಿತು.

ರಸ್ತೆಯಲ್ಲೇ ಧರಣಿ:

ರೈತರಿಗೆ ಆಗಿರುವ ಅನ್ಯಾಯದ ವಿರುದ್ದ ನಾವು ಶಾಂತಿಯುತವಾಗಿ ಬಂದ್ ಮಾಡುತ್ತಿದ್ದರೆ, ಕಾಂಗ್ರೆಸ್‌ನವರು ವಿನಾಕಾರಣ ಸ್ಥಳಕ್ಕೆ ಬಂದು ಅಡ್ಡಿಪಡಿಸಿದರು ಇವರ ದೌರ್ಜನ್ಯ ಹಾಗೂ ದಬ್ಬಾಳಿಕೆಯನ್ನು ನಾವು ಸಹ ಸಹಿಸುವುದಿಲ್ಲ,ನಾವೂ ಕೂಡ ತಾಯಿಯ ಹಾಲನ್ನು ಕುಡಿದು ಬೆ‍ಳೆದಿದ್ದೇವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿ ಸ್ಥಳದಲ್ಲೇ ಧರಣಿ ಆರಂಭಿಸಿದರು.

ಕನಕದಾಸ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಮ್ಯಾರಥನ್ಃಃ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಳ್ಳಾಟ ಹಾಗೂ ಮಾತಿನ ಚಕಮಕಿ ನಡುವೆಯೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಹೊನ್ನಾಳಿ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರೆ ಕಾಂಗ್ರೆಸ್ ಕಾರ್ಯಕರ್ತರೂ ಕೂಡ ರೇಣುಕಾಚಾರ್ಯ ವಿರುದ್ಧ ಧಿಕ್ಕಾರ ಕೂಗಿದರು.

ಖಾಸಗಿ ಬಸ್‌ಗಳಿಗೆ ಅಭಿನಂದನೆ:

ಬಿಜೆಪಿ ಕರೆಗೆ ಓಗೂಟ್ಟು ಖಾಸಗಿ ಬಸ್‌ಗಳನ್ನು ಮಂಗಳವಾರ ಸ್ವಯಂ ಪ್ರೇರಣೆಯಿಂದ ಖಾಸಗಿ ಬಸ್ ನಿಲ್ದಾಣಕ್ಕೆ ಬಾರದೇ ಇದ್ದು ತಮ್ಮ ಪ್ರತಿಭಟನೆಗೆ ಸಹಕರಿಸಿಕ್ಕಾಗಿ ಅಭಿನಂದನೆ ಸಲ್ಲಿಸಿದರು. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಎಂದಿನಂತೆ ಕೆಲಸ ನಿರ್ವಹಿಸಿದವು ಆದರೆ ಕಚೇರಿಗಳು, ಬ್ಯಾಂಕ್ ಗಳಲ್ಲಿ ಜನರ ಸಂಖ್ಯೆ ಅತ್ಯಂತ ಕ್ಷೀಣಿಸಿತ್ತು. ಹಾಲು ಮತ್ತು ತರಕಾರಿ ಮಾರಾಟ ಆಬಾಧಿತವಾಗಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ