ಲೋಕಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಹಲವು ಕ್ಷೇತ್ರದಲ್ಲಿ ಮತಗಳ್ಳತನ: ಸಿ.ಡಿ.ಗಂಗಾಧರ್

KannadaprabhaNewsNetwork |  
Published : Aug 03, 2025, 11:45 PM IST
3ಕೆಎಂಎನ್ ಡಿ21 | Kannada Prabha

ಸಾರಾಂಶ

ರಾಹುಲ್‌ ಗಾಂಧಿ ಅವರು ಲೋಕಸಭೆ ವಿಪಕ್ಷದ ಓರ್ವ ಜವಾಬ್ದಾರಿಯುತ ನಾಯಕರಾಗಿ ದಾಖಲೆಗಳನ್ನು ಕ್ರೂಡೀಕರಿಸಿ ಮತದಾನದಲ್ಲಿ ನಡೆದಿರುವ ವ್ಯಾಪಕ ಲೋಪದ ಬಗ್ಗೆ ಮಾಡಿರುವ ಆರೋಪದಲ್ಲಿ ಸತ್ಯಾಂಶ ಕಂಡುಬರುತ್ತಿದೆ. ಹಾಗಾಗಿ ಎಐಸಿಸಿಯ ಕರೆಯ ಮೇರೆಗೆ ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮತಗಳ್ಳತನದ ವಿರುದ್ಧ ಆ.5 ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ತಾಲೂಕಿನಿಂದ ಕನಿಷ್ಠ ಎರಡು ಸಾವಿರ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮನವಿ ಮಾಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಪೂರ್ವ ತಯಾರಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹಲವು ಕ್ಷೇತ್ರಗಳಲ್ಲಿ ಮತಗಳ್ಳತನ ವ್ಯಾಪಕವಾಗಿ ನಡೆದಿದೆ ಎಂದು ಆರೋಪಿಸಿದರು.

ಇದು ಕಾಂಗ್ರೆಸ್ ಪಕ್ಷದ ಸೋಲಿಗೆ ಕಾರಣವಾಗಿ ಬಿಜೆಪಿಗೆ ಗೆಲುವಾಗಿದೆ. ಈ ಷಡ್ಯಂತ್ರದ ವಿರುದ್ಧ ಪಕ್ಷದ ರಾಷ್ಟ್ರೀಯ ನಾಯಕ, ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ರಾಹುಲ್‌ ಗಾಂಧಿ ಅವರು ಲೋಕಸಭೆ ವಿಪಕ್ಷದ ಓರ್ವ ಜವಾಬ್ದಾರಿಯುತ ನಾಯಕರಾಗಿ ದಾಖಲೆಗಳನ್ನು ಕ್ರೂಡೀಕರಿಸಿ ಮತದಾನದಲ್ಲಿ ನಡೆದಿರುವ ವ್ಯಾಪಕ ಲೋಪದ ಬಗ್ಗೆ ಮಾಡಿರುವ ಆರೋಪದಲ್ಲಿ ಸತ್ಯಾಂಶ ಕಂಡುಬರುತ್ತಿದೆ. ಹಾಗಾಗಿ ಎಐಸಿಸಿಯ ಕರೆಯ ಮೇರೆಗೆ ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಮಂಡ್ಯ ಜಿಲ್ಲೆಯಿಂದ ಕನಿಷ್ಠ 10 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸುತ್ತಾರೆ ಎನ್ನಲಾದ ಲಕ್ಷಾಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಿಸಲಾಗಿತ್ತು. ಇದರಿಂದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಡಿಮೆ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಗ್ರಾಪಂಗಳಿಗೆ ಆಶ್ರಯ ಮನೆಗಳನ್ನು ಕಳೆದ ಎರಡು ವರ್ಷದಿಂದ ಒಂದೂ ಮನೆ ನೀಡಿಲ್ಲ. ಇದರಿಂದ ಮತದಾರರು ಪಕ್ಷ ಸಂಘಟನೆಗೆ ಮತದಾರರ ಬಳಿ ಹೋದಾಗ ನಿಮ್ಮ ಕಾಂಗ್ರೆಸ್ ಪಕ್ಷದಿಂದ ಒಂದೇ ಒಂದು ಆಶ್ರಯ ಮನೆ ಕೊಟ್ಟಿಲ್ಲ ಎಂದು ದೂರುತ್ತಿದ್ದಾರೆ ಎಂದರು

ತಾಲೂಕಿನ ಪ್ರತಿ ಗ್ರಾಪಂಗಳಿಗೆ ಕನಿಷ್ಠ 100 ಇಂದಿರಾ, ಅಂಬೇಡ್ಕರ್, ಬಸವ ವಸತಿ ಯೋಜನೆಗಳ ಅಡಿಯಲ್ಲಿ ಮನೆಗಳನ್ನಾದರೂ ಮಂಜೂರು ಮಾಡಿ ಕಾಂಗ್ರೆಸ್ ಪಕ್ಷದ ಮರ್ಯಾದೆ ಉಳಿಸಬೇಕು ಎಂದು ಗ್ರಾಪಂ ಉಪಾಧ್ಯಕ್ಷ ಹೆಮ್ಮಡಹಳ್ಳಿ ತಿಮ್ಮೇಗೌಡ ಜಿಲ್ಲಾಧ್ಯಕ್ಷರಿಗೆ ಮನವಿ ಮಾಡಿದರು.

ಸಭೆಯಲ್ಲಿ ಹರಳಹಳ್ಳಿ ವಿಶ್ವನಾಥ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಕೆಯುಐಡಿಎಫ್‌ಸಿ ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಜಿಪಂ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ಎಲ್.ದೇವರಾಜು, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ಕಾಂಗ್ರೆಸ್ ವಕ್ತಾರ ಮಾದಾಪುರ ಡಾ.ರಾಮಕೃಷ್ಣೇಗೌಡ, ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ರಾಜಯ್ಯ, ಮುಖಂಡರಾದ ಜಿ.ಎ.ರಾಯಪ್ಪ, ಇಲ್ಯಾಸ್ ಪಾಷ, ಪುರಸಭಾ ಸದಸ್ಯ ಡಿ.ಪ್ರೇಮಕುಮಾರ್, ಗ್ಯಾರಂಟಿ ಸಮಿತಿ ಸದಸ್ಯೆ ಶಿವಮ್ಮ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಚೇತನಾಮಹೇಶ್ ಸೇರಿದಂತೆ ಹಲವರು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ