ಸರ್ಕಾರ ವಿರುದ್ಧ ಬಿಜೆಪಿ ರೈತ ಮೋರ್ಚಾ ಧರಣಿ

KannadaprabhaNewsNetwork |  
Published : Dec 11, 2025, 02:00 AM IST
ಬಿಜೆಪಿ ರೈತ ಮೋರ್ಚಾ ಧರಣಿ | Kannada Prabha

ಸಾರಾಂಶ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಮುಖಂಡರು ಮತ್ತು ಬಿಜೆಪಿ ನಾಯಕರನ್ನು ಪೊಲೀಸರು ಕೆಲ ಕಾಲ ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಮುಖಂಡರು ಮತ್ತು ಬಿಜೆಪಿ ನಾಯಕರನ್ನು ಪೊಲೀಸರು ಕೆಲ ಕಾಲ ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

ಮಂಗಳವಾರ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯ ರೈತರೊಂದಿಗೆ ಪ್ರತಿಭಟನೆ ನಡೆಸಿದ ರಾಜ್ಯ ಬಿಜೆಪಿ ರೈತ ಮೋರ್ಚಾ ಮುಖಂಡರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಹಲವು ಶಾಸಕರು, ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಿದರು.

ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ಉಪಾಧ್ಯಕ್ಷ ರುದ್ರೇಶ್, ಪ್ರಧಾನ ಕಾರ್ಯದರ್ಶಿ ಡಾ। ನವೀನ್, ರಾಜ್ಯ ಕಾರ್ಯದರ್ಶಿ ಮತ್ತು ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ ಹಲವು ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಬಿಜೆಪಿ ಹಿರಿಯ ನಾಯಕರ ನೇತೃತ್ವದಲ್ಲಿ ಮಾಲಿನಿ ಸಿಟಿ ಮೈದಾನದಲ್ಲಿ ಜಮಾಯಿಸಿದ ರೈತರ ಬೃಹತ್ ಗುಂಪು, ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬೃಹತ್ ಪ್ರತಿಭಟನೆ ನಡೆಸಿದರು. ರೈತರೊಂದಿಗೆ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಹಲಗಾ ಗ್ರಾಮದ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಈ ವೇಳೆ ಹೆಚ್ಚಿನ ಜನಸಂಖ್ಯೆಯಿಂದಾಗಿ ಕೆಲಕಾಲ ತಳ್ಳಾಟ, ನೂಕಾಟ ನಡೆಯಿತು.

ಪ್ರತಿಭಟನೆಯಲ್ಲಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಮಾತನಾಡಿ, ರಾಜ್ಯದ ರೈತರ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಕನಿಷ್ಠ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರ ಸಂಕಷ್ಟವನ್ನು ನಿರ್ಲಕ್ಷಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ, ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ, ಕಬ್ಬು ಬೆಳೆಗಾರರ ​​ಕಳವಳಗಳನ್ನು ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮೆಕ್ಕೆಜೋಳ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವು ದಿನಗಳಿಂದ ಆಗ್ರಹಿಸಲಾಗುತ್ತಿದೆ ಆದರೆ ಸರ್ಕಾರ ಇನ್ನೂ ಕಾರ್ಯ ಪ್ರವೃತ್ತವಾಗಿಲ್ಲ, ರೈತರು ತಮ್ಮ ಉತ್ಪನ್ನಗಳನ್ನು ಮಧ್ಯವರ್ತಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.--

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಲಿತರ ಜೊತೆಗೆ ಚರ್ಚಿಸಿ ದೂರು ಪಡೆದು ಕಾನೂನು ಚೌಕಟ್ಟಿನಲ್ಲಿ ಕ್ರಮ: ಅನಿಲ್ ಕುಮಾರ್
ರೈಲುಗಳಲ್ಲಿ ಹೆಚ್ಚಾಗುತ್ತಲೇ ಇದೆ ಗಾಂಜಾ ಸಾಗಣೆ