ಕನ್ನಡಪ್ರಭ ವಾರ್ತೆ ಬಾಗಲಕೋಟೆ
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾದಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರೈತ ವಿರೋಧಿಯಾದ ಸರ್ಕಾರ ಮೆಕ್ಕೆಜೋಳ ಖರೀದಿಯಲ್ಲಿ ಮುಖ್ಯಮಂತ್ರಿಗಳು ಹಣ ಬಿಡುಗಡೆ ಮಾಡಿಲ್ಲ. ರೈತ ವಿರೋಧಿ ಸರ್ಕಾರ ಕಿತ್ತೋಗೆಯಬೇಕು. ಬೆಂಬಲ ಬೆಲೆ ಘೋಷಣೆ ಮಾಡಬೇಕು. ರೈತರ ಸರಣಿ ಆತ್ಮಹತ್ಯೆಗಳು ರಾಜ್ಯದಲ್ಲಿ ನಡೆಯುತ್ತಿದ್ದು ಅದಕ್ಕೆ ಸರ್ಕಾರ ನೇರಹೊಣೆ ಎಂದು ಆಪಾದಿಸಿದರು.
ಇತ್ತೀಚೆಗೆ ಮುಧೋಳದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಯಾರೋ ಮಾಡಿದ ತಪ್ಪಿಗೆ ರೈತರು ಅನುಭವಿಸುವಂತಾಗಿದೆ. ಜಿಲ್ಲೆಯ ತೋಟದ ಮನೆಗಳು ಇಸ್ಪೇಟ್ ಅಡ್ಡೆಗಳಾಗಿವೆ. ಅಕ್ರಮ ಮರಳು ದಂಧೆ ಅವ್ಯಾಹತವಾಗಿ ಜಿಲ್ಲೆಯಲ್ಲಿ ನಡೆದಿದ್ದು, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಿಗೆಟ್ಟು ಹೋಗಿದೆ ಎಂದು ದೂರಿದರು.ಕೃಷ್ಣಾ ಮೇಲ್ದಂಡೆ ಯೋಜನೆಗೆ ತಕ್ಷಣವೇ ₹25 ಸಾವಿರ ಕೋಟಿ ಬಿಡುಗಡೆ ಮಾಡಬೇಕಾಗಿತ್ತು. ಆದರೆ ಇಲ್ಲಿವರೆಗೂ ಒಂದೂ ರೂ.ಪರಿಹಾರ ನೀಡಿಲ್ಲ. ಸರ್ಕಾರಕ್ಕೆ ನಾಚೀಕೆ ಆಗಬೇಕು. ಇಂತಹ ಲಜ್ಜೆಗೆಟ್ಟ ಸಿದ್ದರಾಮಯ್ಯನವರ ಸರ್ಕಾರ ಎಂದೂ ನಾವು ಕಂಡಿಲ್ಲ ಎಂದು ಹೇಳಿದರು.
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ರೈತ ಖರೀದಿ ಕೇಂದ್ರ ತೆರೆಯದೆ ಇರುವುದು ಖಂಡನೀಯ. ಜನರನ್ನು ಮರೆತಿರುವ ಸರ್ಕಾರ ಬಣದ ರಾಜಕಾರಣ ಮಾಡುತ್ತಾ ಹೊರಟಿದ್ದಾರೆ. ಸರ್ಕಾರ ಎರಡೂವರೆ ವರ್ಷದಲ್ಲಿ ಏನು ಕೆಲಸ ಮಾಡದೇ ಕೇವಲ ಕುರ್ಚಿಗಾಗಿ ಬಡಿದಾಡುತ್ತಿದ್ದಾರೆ ಎಂದು ಹೇಳಿದರು.