ಕನ್ನಡಪ್ರಭ ವಾರ್ತೆ ಗೋಕಾಕಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾದರೇ ಜಗದೀಶ್ ಶೆಟ್ಟರ್‌ಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕಾಂಗ್ರೆಸ್ ಪಕ್ಷದವರು ಏನೇ ಹೇಳಿದರೂ ನೀವು ಬಿಜೆಪಿಗೆ ಮತ ನೀಡಬೇಕು. ಬರಗಾಲದ ಸಂದರ್ಭದಲ್ಲೂ ನಮ್ಮ ಕ್ಷೇತ್ರದಲ್ಲಿ ನದಿ ಹಾಗೂ ಕಾಲುವೆಗಳಿಗೆ ನೀರು ಹರಿಸಲಾಗಿದೆ. ಮುಂದಿನ 10 ದಿನಗಳ ಕಾಲ ನದಿ ಹಾಗೂ ಕಾಲುವೆಗಳಿಗೆ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು.
ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತನಾಡಿ, ನಮ್ಮ ಎನ್‌ಡಿಎ ಈಗಾಗಲೇ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಆದರೆ, ಐಎನ್‌ಡಿಐಎ ಒಕ್ಕೂಟವು ಪ್ರಧಾನಿ ಅಭ್ಯರ್ಥಿಯನ್ನು ಏಕೆ ಘೋಷಿಸಿಲ್ಲ? ಸೋಲಿನ ಭೀತಿ ಆ ಪಕ್ಷವನ್ನು ಆವರಿಸಿದೆ ಎಂದು ಲೇವಡಿ ಮಾಡಿದರು.ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಅರಭಾವಿ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಆಗಿದೆ. ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ರಾಜ್ಯದಲ್ಲಿ ಆದರ್ಶ ಕ್ಷೇತ್ರವನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ್, ಮಂಡಳ ಅಧ್ಯಕ್ಷ ಮಹಾದೇವ ಶೆಕ್ಕಿ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ಕಾಳಶೆಟ್ಟಿ, ಮಹಾಂತೇಶ ಕುಡಚಿ, ಮುತ್ತೇಪ್ಪ ಮನ್ನಾಪೂರ ಸೇರಿದಂತೆ ಅರಭಾವಿ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕೋಟ್...ಬೇರೆ ಬೇರೆ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಿದೆ. ಮುಂದೆ ಕೂಡಾ ಹೆಚ್ಚಿನ ಅಭಿವೃದ್ಧಿ ಮಾಡಲಾಗುವುದು. ನಮ್ಮ ಕ್ಷೇತ್ರದಲ್ಲಿ ಎಲ್ಲ ಸಮುದಾಯದ ಜನರು ಅನ್ಯೋನ್ಯವಾಗಿ ಇದ್ದೇವೆ. ಬಸವಣ್ಣನವರು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟದಂತೆ ನಮ್ಮ ಕ್ಷೇತ್ರದಲ್ಲಿ ಎಲ್ಲರೂ ಒಂದಾಗಿ ಇದ್ದೇವೆ.-ಬಾಲಚಂದ್ರ ಜಾರಕಿಹೊಳಿ, ಶಾಸಕ.----------------ನನಗೆ ರಾಜಕೀಯವಾಗಿ 30 ವರ್ಷಗಳ ಅನುಭವ ಇದೆ. ಹಾಗಾಗಿ ಯುವಕರಿಗೆ ಉದ್ಯೋಗ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ಕೃಷಿಗೆ ಸಂಬಂಧಿಸಿದ ಅನೇಕ ಬಲದಲಾವಣೆ ಮಾಡೋಣ. ಎಲ್ಲೇ ನೋಡಿದರೂ ಬೆಳಗಾವಿ ಹೆಸರು ಬರಬೇಕು. ಆ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಯುವಕರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುತ್ತೇವೆ. ಬೆಳಗಾವಿಯಲ್ಲಿ ಜವಳಿ ಪಾರ್ಕ್ ನಿರ್ಮಿಸುತ್ತೇನೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತೇನೆ.-ಜಗದೀಶ್ ಶೆಟ್ಟರ್, ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ.
-----------ಬೆಳಗಾವಿಯ 8 ವಿಧಾನ ಸಭಾ ಕ್ಷೇತ್ರದಲ್ಲಿ ಮೂಡಲಗಿ ವಿಧಾನ ಸಭಾ ಕ್ಷೇತ್ರದಲ್ಲಿ ಹೆಚ್ಚು ಲೀಡ್ ನೀಡಬೇಕು. ಜಗದೀಶ್ ಶೆಟ್ಟರ್ ಆಯ್ಕೆ ಮಾಡುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಯಕತ್ವವನ್ನು ಗಟ್ಟಿಗೊಳಿಸಬೇಕು.- ಮಹಾಂತೇಶ ಕವಟಗಿಮಠ, ವಿಧಾನ ಪರಿಷತ್ ಮಾಜಿ ಸದಸ್ಯ.