ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ನಾರಾಯಣಸಾ ಭಾಂಡಗೆ

KannadaprabhaNewsNetwork |  
Published : Jun 16, 2025, 01:37 AM IST
ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಮತಕ್ಷೇತ್ರದಿಂದ ಮೋದಿ 11 ವಿಶೇಷ ಕಾರ್ಯಾಗಾರ. | Kannada Prabha

ಸಾರಾಂಶ

ಮುಂಬರುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದ್ದು, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದೆ ಬರುವ ವಿಶ್ವಾಸವಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮುಂಬರುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದ್ದು, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದೆ ಬರುವ ವಿಶ್ವಾಸವಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ನಗರದ ಬಿ.ವಿ.ವಿ.ಸಂಘದ ಮಿನಿ ಸಭಾಂಗಣದಲ್ಲಿ ವಿಕಸಿತ ಭಾರತ ಮೋದಿ ಸರಕಾರ 11 ವರ್ಷದ ಸಾಧನಾ ಅಭಿಯಾನದ ಕುರಿತು ನಡೆದ ಕಾರ್ಯಾಗಾರವನ್ನು ಭಾರತಮಾತೆಗೆ ಪುಷ್ಪಾಂಜಲಿ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ರಧಾನಿ ಮೋದಿಯವರಿಂದಾಗಿ ಇಂದು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತಿದೆ, ಜಾಗತಿಕವಾಗಿ ಭಾರತ ಪ್ರಬಲವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಮತಕ್ಷೇತ್ರಗಳಲ್ಲಿಯೂ ಬಿಜೆಪಿ ಗೆದ್ದು ಗದ್ದುಗೆ ಹಿಡಿಯಲಿದೆ ಎಂಬ ವಿಶ್ವಾಸವಿದೆ, ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಸದೃಢ ಹಾಗೂ ಸಮೃದ್ಧ ಭಾರತ ಕಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇದ್ರ ಮೋದಿ ನೇತೃತ್ವದ 11 ವರ್ಷಗಳ ಆಡಳಿತ ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವ ಮೈಲಿಗಲ್ಲಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವಿಕಸಿತ ಭಾರತ ಮೋದಿ ಸರಕಾರ 11ವರ್ಷದ ಸಾಧನಾ ಅಭಿಯಾನದ ಜಿಲ್ಲಾ ಸಹ ಸಂಚಾಲಕ ನಂದು ಗಾಯಕವಾಡ, ದೇಶದಲ್ಲಿ ಅಟಲ್ ಬಿಹಾರಿ ವಾಜಪಾಯಿ ಅವರಿಂದ ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ದೇಶ ಕಂಡ ಪ್ರಗತಿ ವಿವರಿಸಿದರು.ವೇದಿಕೆ ಮೇಲೆ ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ, ನಗರಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ವಿಕಸಿತ ಭಾರತ ಮೋದಿ ಸರಕಾರ 11 ವರ್ಷದ ಸಾಧನಾ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಬಸವರಾಜ ಅವರಾದಿ, ನಗರಸಭೆ ಅಧ್ಯಕ್ಷೆ ಸವಿತಾ ಲಂಕೆನ್ನವರ, ಮುಖಂಡರಾದ ಡಾ.ಎಂ.ಎಸ್. ದಡ್ಡೆನ್ನವರ, ಗುಂಡುರಾವ ಶಿಂಧೆ, ಬಸವರಾಜ ಯಂಕಂಚಿ, ಲಕ್ಷ್ಮೀ ನಾರಾಯಣ ಕಾಸಟ್, ಮುತ್ತಣ್ಣ ಬೆಣ್ಣೂರ ಸೇರಿದಂತೆ ನಗರಸಭೆ ಸದಸ್ಯರು, ಪಕ್ಷದ ಮುಖಂಡರು, ನಗರ ಹಾಗೂ ಗ್ರಾಮೀಣ ಮಂಡಲಗಳ ಪದಾಧಿಕಾರಿಗಳು, ಜಿಲ್ಲಾ ಸಂಚಾಲಕರು, ವಿವಿಧ ಮೋರ್ಚಾ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು.

ವಿಕಸಿತ ಭಾರತ ಮೋದಿ ಸರಕಾರ 11 ವರ್ಷದ ಸಾಧನಾ ಅಭಿಯಾನದ ನಗರ ಮಂಡಲ ಸಂಚಾಲಕರನ್ನಾಗಿ ಚಂದ್ರಕಾಂತ ಪತ್ತಾರ, ಕಾಂತು ಖಾತೆದಾರ, ಸಿದ್ದೇಶ್ವರ ಜಿರಗಿ, ಗ್ರಾಮೀಣ ಮಂಡಲ ಸಂಚಾಲಕರಾಗಿ ಕಲ್ಲಪ್ಪ ಭಗವತಿ, ಮುತ್ತು ಸೀಮಿಕೇರಿ, ಬಸವರಾಜ ಪಾಟೀಲ ಅವರನ್ನು ನೇಮಿಸಿಲಾಯಿತು, ನಂತರ ವಿಕಸಿತ ಭಾರತ 2047 ಕನಸನ್ನು ನನಸಾಗಿಸಲು ಪ್ರತಿಜ್ಞೆ. ಮಾಡಲಾಯಿತು.

ಉಮೇಶ ಹಂಚಿನಾಳ ನಿರೂಪಿಸಿದರು, ಮಲ್ಲೇಶ ವಿಜಾಪುರ ಸ್ವಾಗತಿಸಿದರು, ಕಲ್ಲಪ್ಪ ಭಗವತಿ ಪ್ರತಿಜ್ಞಾವಿಧಿ ಭೋದಿಸಿದರು, ಮುತ್ತು ಸಿಮಿಕೇರಿ ವಂದಿಸಿದರು.

ಸಂತಾಪ: ಗುಜರಾತಿನ ಅಹಮದಾಬಾದ್‌ ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತರಾದ ಅಮಾಯಕ ಜನರಿಗೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಿಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆ.ಎಸ್.ಪುಟ್ಟಣ್ಣಯ್ಯ ಆದರ್ಶ ಎಲ್ಲಾ ಕಾಲಕ್ಕೂ ಮಾದರಿ, ಅನುಸರಣೀಯ: ನಾಗತಿಹಳ್ಳಿ ಚಂದ್ರಶೇಖರ್
ಮೇಲುಕೋಟೆ: ಶ್ರೀದೇವಿ ಭೂದೇವಿಯರಿಗೆ ನೂರ್ ತಡಾ ಉತ್ಸವ