ಕನ್ನಡಪ್ರಭ ವಾರ್ತೆ ಉಡುಪಿ
ಅವರು ಶುಕ್ರವಾರ ಚಿಕ್ಕಮಗಳೂರಿನ ವಿವಿಧ ಕಡೆಗಳಲ್ಲಿ ಮತಪ್ರಚಾರ ನಡೆಸಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೇಳಿದಂತೆ ನಡೆದುಕೊಂಡಿದೆ. ಚುನಾವಣೆಗೆ ಮೊದಲು ನೀಡಿನ 5 ಗ್ಯಾರಂಟಿಗಳ ಭರವಸೆಯನ್ನು ಈಡೇರಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರು., 2 ಲಕ್ಷ ರು.ವರೆಗೆ ಸಾಲ ಮನ್ನಾ, ನಿರುದ್ಯೋಗಿ ಯುವಕರಿಗೆ 1 ಲಕ್ಷ ರು. ವೇತನ ಇತ್ಯಾದಿ ಭರವಸೆಗಳನ್ನು ನೀಡಿದೆ. ಸರ್ಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ಗ್ಯಾರಂಟಿಯನ್ನು ನಾನು ನೀಡುತ್ತೇನೆ ಎಂದರು.ನಿಮ್ಮ ಕೆಲಸ ಮಾಡುವುದಕ್ಕಾಗಿಯೇ ನನ್ನನ್ನು ಗೆಲ್ಲಿಸಿ, ನೀವು ಗೆಲ್ಲಿಸಿದ ಮೇಲೆ ಕೆಲಸ ಮಾಡುವ ಜವಾಬ್ದಾರಿ ನನ್ನದು, ಮಾಡದಿದ್ದರೆ ಕೇಳುವ ಹಕ್ಕು ನಿಮಗಿದೆ ಎಂದವರು ಹೇಳಿದರು.
ಈ ಸಂದರ್ಭ ಶಾಸಕ ತಮ್ಮಯ್ಯ ಮತ್ತು ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ಗಾಯತ್ರಿ ಶಾಂತೆ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸಖರಾಯಪಟ್ಟಣ ಹೋಬಳಿ ಕಾಂಗ್ರೆಸ್‌ನ ಎಲ್ಲ ಘಟಕದ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.* ಕಣಜಾರಿನಲ್ಲಿ ಮತಯಾಚನೆ
ಈ ಸಂದರ್ಭ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಪ್ರಮುಖರಾದ ಸುಭಿತ್, ವಿಜ್ಞೇಶ್ ಕಿಣಿ, ಡಿ.ಆರ್. ರಾಜಣ್ಣ, ಸದಾಶಿವ ದೇವಾಡಿಗ, ಸುಭೂದ್ ಹಾಗೂ ಇತರೆ ಮುಂಚೂಣಿ ಘಟಕದ ಅಧ್ಯಕ್ಷರು, ಸದಸ್ಯರು, ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.