ಪಂಚರಾಜ್ಯ ಚುನಾವಣೆಯಲ್ಲಿ ೩ ರಾಜ್ಯದಲ್ಲಿ ಬಿಜೆಪಿ ಸರ್ಕಾರ

KannadaprabhaNewsNetwork |  
Published : May 05, 2026, 01:30 AM IST
ಪಂಚರಾಜ್ಯ ಚುನಾವಣೆಯಲ್ಲಿ ೩ ರಾಜ್ಯದಲ್ಲಿ ಬಿಜೆಪಿ ಸರ್ಕಾರ | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿ ಸರ್ಕಾರ ರಚನೆ ಮಾಡುವುದ ಶತಸಿದ್ದ ಎಂದು ಮಾಜಿ ಐಎಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಬಿ.ಎಚ್.ಅನಿಲ್‌ಕುಮಾರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ದೇಶದ ಇತರೇ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿ ಸರ್ಕಾರ ರಚನೆ ಮಾಡುವುದ ಶತಸಿದ್ದ ಎಂದು ಮಾಜಿ ಐಎಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಬಿ.ಎಚ್.ಅನಿಲ್‌ಕುಮಾರ್ ತಿಳಿಸಿದರು.ಪಟ್ಟಣದ ಮುಖ್ಯ ಬಸ್ ನಿಲ್ದಾಣದಲ್ಲಿ ತಾಲೂಕು ಬಿಜೆಪಿ ಮಂಡಲ ಆಯೋಜನೆ ಮಾಡಲಾಗಿದ್ದ ಪಂಚರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಜಯಗಳಿಸಿ ಹಿನ್ನೆಲೆಯಲ್ಲಿ ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ೩೦ ವರ್ಷಗಳಿಂದ ಭದ್ರ ಕೋಟೆಯಾಗಿದ್ದ ಪಶ್ಚಿಮ ಬಂಗಾಳದಲ್ಲಿ ಇಂದು ನಡೆದ ಮತ ಏಣಿಕೆಯಲ್ಲಿ ೧೯೮ ಕ್ಕೂ ಅಧಿಕ ನಮ್ಮ ಅಭ್ಯರ್ಥಿಗಳ ಜಯಶೀಲರಾಗಿದ್ದಾರೆ. ಪುದುಚೇರಿ , ಅಸ್ಸಾಂ ನಲ್ಲಿ ಕೂಡ ಈ ಬಾರಿ ನಮ್ಮ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದು ನಮ್ಮ ಸರ್ಕಾರ ರಚನೆಯಾಗಲಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನ ತಕ್ಕ ಪಾಠ ಕಲಿಸಿ ಮತ್ತೆ ಇಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡೋದು ಶತಸಿದ್ದ ಎಂದು ಭವಿಷ್ಯ ನುಡಿದರು. ಮಂಡಲದ ತಾಲೂಕು ಅಧ್ಯಕ್ಷ ರುದ್ರೇಶ್ ಮಾತನಾಡಿ ಪಂಚ ರಾಜ್ಯದ ಚುನಾವಣೆಯಲ್ಲಿ ೩ ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ರಚನೆಯಾಗಲಿದ್ದು, ದೇಶದಲ್ಲಿ ಈಗಾಗಲೇ ೧೯ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಅದರ ಮುಂದುವರೆದ ಭಾಗವಾಗಿ ದಕ್ಷಿಣ ಭಾರತದಲ್ಲಿ ತನ್ನ ಪ್ರಾಬಲ್ಯವನ್ನ ಹೆಚ್ಚಿಕೊಳ್ಳುತ್ತಿದೆ ಎಂದು ತಿಳಿದರು.ನಿಕಟ ಪೂರ್ವ ಅಧ್ಯಕ್ಷ ಡಾ.ಕೆ.ಎಲ್.ದರ್ಶನ್ ಮಾತನಾಡಿ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿಯ ಹಾಗೂ ಕಾರ್ಯವೈಕರಿಗೆ ರಾಜ್ಯದಿಂದ ರಾಜ್ಯಕ್ಕೆ ಬಿಜೆಪಿ ಪರ ಮತಗಳ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎನ್ನುವ ಕ್ಷೇತ್ರದಲ್ಲಿ ಗಲುವು ಸಾಧಿಸಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದು, ಪಂಚ ರಾಜ್ಯಗಳಲ್ಲಿ ಬಿಜೆಪಿ ಪಕ್ಷಕ್ಕೆ ಮತ ನೀಡಿದ ಎಲ್ಲರಗೂ ಧನ್ಯವಾದವನ್ನ ತಿಳಿಸಿದರು. ಸಂಭ್ರಮಾಚರಣೆಯಲ್ಲಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ದಾಸಲುಕುಂಟೆ ರಾಘು ಮುಖಂಡರಾದ ಸ್ವಾಮಿ, ಗೋವಿಂದರಾಜು. ಮಂಜುನಾಥ್, ಪ್ರದೀಪ್, ರೂಪಶ್ರೀ, ದಯಾಮಣಿ, ರಂಗರಾಜು, ಮೂರ್ತಿ, ಚೇತನ್, ಅರಣ್, ದಯಾನಂದ್, ಆನಂದ್, ರಂಜಿತ್, ನಟರಾಜ್, ನಂಜುಡಪ್ಪ, ರಡ್ಡಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಪ ಚುನಾವಣೆಯಲ್ಲಿ ಗೆಲುವು: ಕಾಂಗ್ರೆಸ್ಸಿಗರ ಸಂಭ್ರಮ ಆಚರಣೆ
ಪಶ್ಚಿಮ ಬಂಗಾಳಕ್ಕೆ ಬಿಜೆಪಿಯಿಂದ ಹೊಸ ಬೆಳಕು: ಡಾ.ನಿಂಗರಾಜ್‌ಗೌಡ